ADVERTISEMENT

ಉಪ್ಪುಂದ: ಕೋಡಿಹಬ್ಬ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 4:21 IST
Last Updated 8 ನವೆಂಬರ್ 2024, 4:21 IST
ಉಪ್ಪುಂದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ಮಂಗಳವಾರ ಸಂಜೆ ದೇವಸ್ಥಾನದ ಸಭಾಭವನದಲ್ಲಿ ನಡೆದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿದರು
ಉಪ್ಪುಂದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ಮಂಗಳವಾರ ಸಂಜೆ ದೇವಸ್ಥಾನದ ಸಭಾಭವನದಲ್ಲಿ ನಡೆದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿದರು   

ಬೈಂದೂರು: ಉಪ್ಪುಂದ ಅಮ್ಮನವರ ದೇವಸ್ಥಾನವು ಕೊಲ್ಲೂರು ದೇವಸ್ಥಾನದಷ್ಟೆ ಪ್ರಾಮುಖ್ಯತೆ ಹೊಂದಿದ್ದು, 35 ವರ್ಷಗಳ ಬಳಿಕ ಶ್ರೀದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ ಕೋಟೇಶ್ವರ ಹಬ್ಬಕ್ಕಿಂತ ಮೊದಲು ಬಂದಿರುವುದರಿಂದ ಜಾತ್ರೆಗೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಬಹುದು. ಈ ನಿಟ್ಟಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ನ. 11ರಿಂದ ಆರಂಭಗೊಳ್ಳುವ ಉಪ್ಪುಂದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ಅಂಗವಾಗಿ ಮಂಗಳವಾರ ಸಂಜೆ ನಡೆದ ಜಾತ್ರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ ಶೆಟ್ಟಿ ಪ್ರಸ್ತಾವಿಸಿ, ‘ಸಾರ್ವಜನಿಕರ ಸಲಹೆ–ಸೂಚನೆ ಪರಿಗಣಿಸಿ, ಅಮ್ಮನವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದರು. 

ADVERTISEMENT

ರಾಷ್ಟ್ರೀಯ ಹೆದ್ದಾರಿ ಬಿದಿದೀಪ ದುರಸ್ತಿ, ಗಿಡಗಂಟಿಗಳ ತೆರವಿಗೆ ಕ್ರಮಕೈಗೊಳ್ಳುವುದಾಗಿ ಸಮೃದ್ಧ ಜನಸೇವಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ ಶೆಟ್ಟಿ ಉಪ್ಪುಂದ ಹೇಳಿದರು.

ರಾಣಿಬಲೆ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಮಾತನಾಡಿ, ದೇವಸ್ಥಾನದ ರಥಬೀದಿ ಕಿರಿದಾಗಿದ್ದು, ಮೇಲ್ನೋಟಕ್ಕೆ ಒತ್ತುವರಿಯಾಗಿದೆ ಎಂಬ ಸಂದೇಹವಿದೆ. ಹಾಗಾಗಿ ಸರ್ವೆಕಾರ್ಯ ನಡೆಸಿ ನಂತರ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಸ್ತೆ ವಿಸ್ತರಿಸುವಂತೆ ಮನವಿ ಮಾಡಿದರು. ಸೇರಿದ್ದ ಸಾರ್ವಜನಿಕರು ಇವರ ಮಾತಿಗೆ ಧನಿಗೂಡಿಸಿದರು.

ಉಪ್ಪುಂದ ಗ್ರಾ.ಪಂ. ಅಧ್ಯಕ್ಷ ಮೋಹನಚಂದ್ರ, ಉಪಾಧ್ಯಕ್ಷೆ ಮಹಾಲಕ್ಷ್ಮಿ ಗಾಣಿಗ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ನಾರಾಯಣ ಖಾರ್ವಿ, ಅರ್ಚಕ ಪ್ರಕಾಶ ಉಡುಪ, ರಾಮ ಎಸ್., ಲಲಿತಾ ಶೆಟ್ಟಿ, ಅಂಬಿಕಾ, ರಾಜೇಶ ದೇವಾಡಿಗ, ಯು.ರವೀಂದ್ರ ಪ್ರಭು, ಜನಾರ್ದನ ಮಾಚ ಪೂಜಾರಿ, ಪ್ರಭಾರ ಸಿಇಒ ಸುದರ್ಶನ ಎಸ್., ತಹಶೀಲ್ದಾರ್‌ ಪ್ರದೀಪ್ ರಾಂ, ವೃತ್ತ ನಿರೀಕ್ಷಕ ಸವಿತ್ರತೇಜ್, ಠಾಣಾಧಿಕಾರಿ ತಿಮ್ಮೇಶ ಬಿ.ಎನ್.,, ವೈದ್ಯಾಧಿಕಾರಿ ಡಾ. ರಾಜೇಶ್, ದೇವಸ್ಥಾನದ ಮಾಜಿ ಧರ್ಮದರ್ಶಿ ಬಿಜೂರು ಜಯರಾಮ ಶೆಟ್ಟಿ ಇದ್ದರು. ಯು.ಸಂದೇಶ ಭಟ್ ಸ್ವಾಗತಿಸಿ, ನಿರೂಪಿಸಿದರು. ಗಣೇಶ ದೇವಾಡಿಗ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.