ADVERTISEMENT

ಹೆಬ್ರಿ | ರಕ್ತದಾನ ಶಿಬಿರ: 80 ಯುನಿಟ್ ರಕ್ತ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 31 ಮೇ 2024, 14:18 IST
Last Updated 31 ಮೇ 2024, 14:18 IST
ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶೆಟ್ಟಿ ಉದ್ಘಾಟಿಸಿದರು
ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶೆಟ್ಟಿ ಉದ್ಘಾಟಿಸಿದರು   

ಹೆಬ್ರಿ: ಪರಿಶ್ರಮ ಶಿವಪುರ ಇವರ ಆಶ್ರಯದಲ್ಲಿ ಅಭಯಹಸ್ತ ಚಾರಿಟಬಲ್ ಟ್ರಸ್ಟ್ ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಎಚ್‌ಡಿಎಫ್‌ಸಿ ಬ್ಯಾಂಕ್ ಮಂಗಳೂರು, ಮಣಿಪಾಲದ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಶಿವಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಈಚೆಗೆ ನಡೆಯಿತು.

ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶೆಟ್ಟಿ ಶಿಬಿರ ಉದ್ಘಾಟಿಸಿದರು.

ಉಡುಪಿ ಅಭಯಹಸ್ತ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲ್ಯಾನ್ ಮಣಿಪಾಲ, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಶಿವಪುರ, ಬಿಜೆಪಿ ಹೆಬ್ರಿ ಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಿನಾರಾಯಣ, ಬಿಜೆಪಿ ಹೆಬ್ರಿ ಯುವ ಮೋರ್ಚಾ ಅಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್, ಶಿವಪುರದ ವೈದ್ಯ ಡಾ. ಗುರುಪ್ರಸಾದ್, ಮಣಿಪಾಲದ ವೈದ್ಯ ಡಾ. ಅಝೀಸ್, ಶಿವಪುರದ ಗುತ್ತಿಗೆದಾರ ಶ್ರೀನಿವಾಸ್ ಹೆಬ್ಬಾರ್, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಪೂಜಾರಿ ಶಿವಪುರ, ಹೆಬ್ರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಸುಧಾಕರ ಹೆಗ್ಡೆ, ಶಿವಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಗಂಧಿ ಎಸ್ ನಾಯಕ್, ಎಚ್‌ಡಿಎಫ್‌ಸಿ ಬ್ಯಾಂಕ್ ಮಂಗಳೂರಿನ ಪ್ರಬಂಧಕ ಮನೋಜ್ ಪುತ್ರನ್, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯದ ಅಧ್ಯಕ್ಷ ಧನುಷ್, ಪರಿಶ್ರಮ ಶಿವಪುರದ ಗೌರವಾಧ್ಯಕ್ಷ ದಿವಾನಂದ ಪೂಜಾರಿ, ಅಧ್ಯಕ್ಷ ಅಜಿತ್ ಶೆಟ್ಟಿ, ಉಪಾಧ್ಯಕ್ಷ ಪ್ರದೀಪ್ ಇದ್ದರು.

ADVERTISEMENT

ಉಡುಪಿ ಅಭಯಹಸ್ತ ‌ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ‌ಸತೀಶ್ ಸಾಲ್ಯಾನ್ ಮಣಿಪಾಲ, ಶಿವಪುರ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಮತ್ತು 50ಕ್ಕಿಂತ ಹೆಚ್ಚು ಸಲ ರಕ್ತದಾನ ಮಾಡಿದ ಶಿವಪುರದ ಜನಾರ್ದನ್ ಭಟ್ ಅವರನ್ನು ಸನ್ಮಾನಿಸಲಾಯಿತು. ಶಿಬಿರದಲ್ಲಿ 80 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.