ADVERTISEMENT

16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 19:50 IST
Last Updated 20 ಫೆಬ್ರುವರಿ 2021, 19:50 IST
ಬಸವರಾಜ ಬೊಮ್ಮಾಯಿ, ಗೃಹ ಸಚಿವ 
ಬಸವರಾಜ ಬೊಮ್ಮಾಯಿ, ಗೃಹ ಸಚಿವ    

ಉಡುಪಿ: ‘ರಾಜ್ಯ ಸರ್ಕಾರ ಈ ವರ್ಷ 6 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ ಮಾಡಿಕೊಳ್ಳುತ್ತಿದ್ದು, ಮುಂದಿನ 3 ವರ್ಷಗಳಲ್ಲಿ 16 ಸಾವಿರ ಪೊಲೀಸರ ನೇಮಕಾತಿ ಮಾಡಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾರ್ಕಳದಲ್ಲಿ ಶನಿವಾರ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ‘ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಶೇ 25 ಮಹಿಳೆಯರಿಗೆ ಮತ್ತು ಶೇ 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು’ ಎಂದರು.

‘ಪೊಲೀಸ್‌ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಮಾರ್ಚ್‌ 31 ರೊಳಗೆ ವರದಿ ಸಲ್ಲಿಸಲಿದ್ದು, ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದ ಅವರು,‘ಈಗಾಗಲೇ ರಾಜ್ಯ ಸರ್ಕಾರ 11 ಸಾವಿರ ಪೊಲೀಸ್ ವಸತಿ ಸಮುಚ್ಚಯ ನಿರ್ಮಾಣ ಮಾಡಿದ್ದು, ಬೇರೆ ರಾಜ್ಯಕ್ಕೆ ಹೋಲಿಸಿದರೆ ವಸತಿ ನಿರ್ಮಾಣದಲ್ಲಿ ರಾಜ್ಯವೇಪ್ರಥಮ ಸ್ಥಾನದಲ್ಲಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.