ADVERTISEMENT

ಬ್ರಹ್ಮಾವರ: ಮತ್ತೆ ಬಿರುಸುಗೊಂಡ ಮಳೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 14:24 IST
Last Updated 7 ಜುಲೈ 2024, 14:24 IST
ಕೋಟತಟ್ಟು ಪಡುಕರೆಯಲ್ಲಿ ಬೃಹತ್‌ ಗಾತ್ರದ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು
ಕೋಟತಟ್ಟು ಪಡುಕರೆಯಲ್ಲಿ ಬೃಹತ್‌ ಗಾತ್ರದ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಯಿತು   

ಬ್ರಹ್ಮಾವರ: ಬ್ರಹ್ಮಾವರ ಕೋಟ ಪರಿಸರದಲ್ಲಿ ಭಾನುವಾರ ಮಧ್ಯಾಹ್ನದಿಂದ ಮತ್ತೆ ಭಾರಿ ಮಳೆಯಾಗುತ್ತಿದ್ದು, ನೆರೆ ಭೀತಿ ಕಾಣಿಸಿಕೊಂಡಿದೆ. ಕೋಟ ಪರಿಸರದಲ್ಲಿ ಮಳೆಯೊಂದಿಗೆ ಗಾಳಿಯೂ ರಭಸವಾಗಿ ಬೀಸುತ್ತಿದ್ದು, ಅನೇಕ ಕಡೆ ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾದ ಬಗ್ಗೆ ವರದಿಯಾಗಿದೆ.

ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡುಕರೆ ಕಡಲ ಕಿನಾರೆಗೆ ಸಂಪರ್ಕಿಸುವ ಮೀನುಗಾರಿಕಾ ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ 2 ಮರಗಳು ಧರೆಗುರುಳಿ ವಾಹನ‌ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳೀಯಾಡಳಿತ ಪ್ರತಿನಿಧಿಗಳು, ಸ್ಥಳೀಯರ ನೆರವಿನೊಂದಿಗೆ ತೆರವುಗೊಳಿಸಲಾಯಿತು. ಮಡಿಸಾಲು, ಸೀತಾ ನದಿ ಉಕ್ಕಿ ಹರಿಯುತ್ತಿವೆ. ಕೋಟ ಪರಿಸರದ ಬನ್ನಾಡಿ ಅಚ್ಲಾಡಿಯಲ್ಲೂ ನೆರೆ ಭೀತಿ ಎದುರಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT