ADVERTISEMENT

ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಲು ಶಾಸಕ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 14:47 IST
Last Updated 10 ನವೆಂಬರ್ 2024, 14:47 IST

ಬೈಂದೂರು: ಮಳೆ ಕಡಿಮೆಯಾಗಿ 10– 15 ದಿನ ಕಳೆದರೂ ಇನ್ನೂ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸದೆ ಇರುವುದರಿಂದ ನದಿ, ಉಪ ನದಿಗಳ ನೀರು ಸಮುದ್ರ ಸೇರುತ್ತಿದ್ದು ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಕೂಡಲೇ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಸೂಚಿಸಿದ್ದಾರೆ.

ಈ ಬಾರಿ ಚೆನ್ನಾಗಿ‌ ಮಳೆಯಾಗಿದ್ದು, ನೀರು ಉಳಿಸಿಕೊಳ್ಳಲು ಸಾಧ್ಯವಾಗದೆ ಇದ್ದರೆ ಕಷ್ಟ. ಇನ್ನು ಕೆಲವು ಗ್ರಾಮಗಳಿಗೆ ನೀರಿನ ಅವಶ್ಯಕತೆಯೂ ಹೆಚ್ಚಿದೆ. ಹೀಗಾಗಿ ಸಂಬಂಧಪಟ್ಟವರು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ನೀರು ಸಮುದ್ರ ಸೇರುವುದನ್ನು ತಪ್ಪಿಸಬೇಕು. ನದಿ, ಉಪನದಿಗಳ ನೀರಿಗೆ ಉಪ್ಪು ನೀರು ಸೇರುವುದು, ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸಿ ನೀರು ಸಂಗ್ರಹಕ್ಕೆ ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಿರ್ವಹಣೆ ಅಗತ್ಯ: ಅನೇಕ ಕಡೆ ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ. ಗ್ರಾಮ ಪಂಚಾಯಿತಿಗಳು ಸೇರಿದಂತೆ ನಗರಾಡಳಿತ ಸಂಸ್ಥೆಗಳು ಇದರ ಬಗ್ಗೆ ಮುತುವರ್ಜಿ ವಹಿಸಬೇಕು. ತಮ್ಮ ವ್ಯಾಪ್ತಿಯಲ್ಲಿರುವ ಅಣೆಕಟ್ಟಿಗೆ ಹಲಗೆ ಹಾಕದಿರುವುದು ಅಥವಾ ನಿರ್ವಹಣೆ ಮಾಡದೆ ಇರುವುದು ಕಂಡು ಬಂದಲ್ಲಿ ನನಗೆ ಅಥವಾ ನನ್ನ ಕಚೇರಿ ಗಮನಕ್ಕೆ ತನ್ನಿ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.