ADVERTISEMENT

ಬೈಂದೂರು | ಯಳಜಿತ್ ಶಾಲೆಗೆ ₹25 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 13:57 IST
Last Updated 19 ಅಕ್ಟೋಬರ್ 2024, 13:57 IST
ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ರಮಣಶ್ರೀ ಗ್ರೂಪ್‌ನ ಅಧ್ಯಕ್ಷ ಎಸ್. ಷಡಕ್ಷರಿ ಭೇಟಿ ನೀಡಿ ನಿರ್ಮಾಣ ಹಂತದಲ್ಲಿರುವ ರಂಗಮAದಿರ ಹಾಗೂ ಎರಡು ತರಗತಿ ಕೋಣೆಗಳನ್ನು ವೀಕ್ಷಿಸಿದರು.
ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ರಮಣಶ್ರೀ ಗ್ರೂಪ್‌ನ ಅಧ್ಯಕ್ಷ ಎಸ್. ಷಡಕ್ಷರಿ ಭೇಟಿ ನೀಡಿ ನಿರ್ಮಾಣ ಹಂತದಲ್ಲಿರುವ ರಂಗಮAದಿರ ಹಾಗೂ ಎರಡು ತರಗತಿ ಕೋಣೆಗಳನ್ನು ವೀಕ್ಷಿಸಿದರು.   

ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಅಡಿಯಲ್ಲಿ ಗುರುತಿಸಲ್ಪಟ್ಟ ಶತಮಾನೋತ್ಸವ ಆಚರಿಸುತ್ತಿರುವ ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ರಮಣಶ್ರೀ ಗ್ರೂಪ್‌ ಅಧ್ಯಕ್ಷ ಎಸ್. ಷಡಕ್ಷರಿ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಬಳಿಕ ಕುಟುಂಬ ಸಮೇತರಾಗಿ ಭೇಟಿ ನೀಡಿದರು.

ನಿರ್ಮಾಣ ಹಂತದಲ್ಲಿರುವ ರಂಗಮಂದಿರ, 2 ತರಗತಿ ಕೋಣೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ, ತಮ್ಮ ಟ್ರಸ್ಟ್ ವತಿಯಿಂದ ₹25 ಲಕ್ಷ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.

ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಗುರುರಾಜ್ ಗಂಟಿಹೊಳೆ ಅವರು ಷಡಕ್ಷರಿ ಅವರನ್ನು ಗೌರವಿಸಿ ಅವರನ್ನು ಶ್ಲಾಘಿಸಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿ ತಾವು ಹಾಕಿಕೊಂಡಿರುವ ಕಾರ್ಯಯೋಜನೆಗಳ ಮಾಹಿತಿ ನೀಡಿ, ಸಮೃದ್ಧ ಬೈಂದೂರು ಪರಿಕಲ್ಪನೆ ಬಗ್ಗೆ ವಿವರಿಸಿದರು.

ADVERTISEMENT

ಸಮೃದ್ಧ ಬೈಂದೂರು ಟ್ರಸ್ಟ್ ಅಧ್ಯಕ್ಷ ಸುರೇಶ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ ಶೆಟ್ಟಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಮಂಗೇಶ್ ಶಾನುಭಾಗ್, ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಇದ್ದರು. ಮುಖ್ಯ ಶಿಕ್ಷಕಿ ಪದ್ಮಾವತಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸದಾಶಿವ ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.