ಹಿರಿಯಡ್ಕ: ಪೆರ್ಡೂರು ಸಮೀಪದ ಬೈರಂಪಳ್ಳಿಯ ಸೀನ ನಾಯ್ಕ್ ಎಂಬುವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಲಾಗಿದೆ.
ನಾಯಿಯನ್ನು ಹಿಡಿಯಲು ಹೋದ ಚಿರತೆ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಬಾವಿಗೆ ಬೋನ್ ಅಳವಡಿಸಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ. ಸುಮಾರು 1.6 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಯಿತು.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಿದ್ದೇಶ್ವರ, ಉಪ ವಲಯ ಅರಣ್ಯಾಧಿಕಾರಿಗಳಾದ ನವೀನ್, ಶೇಖರ್, ಗಣೇಶ್, ಗಸ್ತು ಅರಣ್ಯ ಪಾಲಕರಾದ ಶ್ರೀಕಾಂತ್, ಅರುಣ್, ನಿಂಗರಾಜು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.