ADVERTISEMENT

ಕುಂದಾಪುರ: ದಾಖಲೆ ಇಲ್ಲದ ₹ 37.49 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2023, 16:31 IST
Last Updated 12 ಏಪ್ರಿಲ್ 2023, 16:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕುಂದಾಪುರ: ನಗರದ ಹೊರವಲಯದಲ್ಲಿರುವ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ದಾಖಲೆಯಿಲ್ಲದೆ ಸಾಗಿಸುತ್ತಿದ್ದ ₹ 37.49 ಲಕ್ಷ ನಗದನ್ನು ಫ್ಲೈಯಿಂಗ್ ಸ್ಕ್ವಾಡ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಉಡುಪಿ ನಿವಾಸಿ ಪ್ರಸಾದ್ ಶೇಟ್ ಎಂಬುವರು ಹಣವನ್ನು ಉಡುಪಿಯಿಂದ ಭಟ್ಕಳಕ್ಕೆ ಕೊಂಡೊಯ್ಯುವಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು ನಗದನ್ನು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ಮೊತ್ತವಾಗಿರುವುದರಿಂದ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಜಗದೀಶ್ ನಾಯಕ್ ಹಾಗೂ ಮಹೇಶ ಹೊಳ್ಳ ಅವರ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ ಸ್ಥಳೀಯ ಪೋಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದೆ.

ADVERTISEMENT

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.