ADVERTISEMENT

ಸಹಕಾರಿ ಸಂಘದಿಂದ ಸಮಾಜಕ್ಕೆ ಕೊಡುಗೆ: ಶಾಸಕ ಗುರುರಾಜ ಗಂಟಿಹೊಳೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2024, 4:41 IST
Last Updated 19 ನವೆಂಬರ್ 2024, 4:41 IST
71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಕಾರ್ಯಕ್ರಮವನ್ನು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.
71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಕಾರ್ಯಕ್ರಮವನ್ನು ಶಾಸಕ ಗುರುರಾಜ ಗಂಟಿಹೊಳೆ ಉದ್ಘಾಟಿಸಿದರು.   

ಬೈಂದೂರು: ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡಮಟ್ಟದಲ್ಲಿ ವಿಸ್ತರಣೆಗೊಂಡರೂ ಅದಕ್ಕೆ ಸವಾಲೆಸುವ ರೀತಿ ಸಹಕಾರಿ ಕ್ಷೇತ್ರ ಬೆಳೆದಿದೆ. ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸ ಮಾಡುತ್ತಿದೆ. ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸತನ ತಂದು ಅದರ ಲಾಭದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ನಾಗೂರಿನಲ್ಲಿ ಭಾನುವಾರ ಕರ್ನಾಟಕ ಸಹಕಾರಿ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ, ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ, ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮಗು ಶಿಕ್ಷಣ ವಂಚಿತವಾಗದೆ ಪ್ರತಿಭಾವಂತನಾಗಬೇಕು ಎಂಬ ಉದ್ದೇಶದಿಂದ ಲಾಭಾಂಶದ ಒಂದಂಶವನ್ನು ಶಿಕ್ಷಣ ಸಂಬಂಧಿತ ಚಟುವಟಿಕೆಗೆ ನೀಡುವ ಮೂಲಕ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಸಮಾಜಕ್ಕೆ ಅನನ್ಯ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ADVERTISEMENT

ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್ ಅಧ್ಯಕ್ಷತೆ ವಹಿಸಿದ್ದರು. ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ನರೇಂದ್ರ ಕುಮಾರ್ ‘ಸಹಕಾರಿ ಉದ್ಯಮಗಳಲ್ಲಿ ಪರಿವರ್ತನೆ’ ವಿಷಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಮಹಾಮಂಡಲದ ಶಿಕ್ಷಣ ನಿಧಿಗೆ ₹9,02,172 ಮೌಲ್ಯದ ಚೆಕ್‌  ನೀಡಲಾಯಿತು. ನಿವೃತ್ತರಾದ ಶಿಕ್ಷಕ ಗಿರೀಶ ಶ್ಯಾನುಭಾಗ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿ ಗೋವಿಂದ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸರ್ಕಾರಿ ಶಾಲಾ ಗೌರವ ಶಿಕ್ಷಕರಿಗೆ ಗೌರವಧನ ವಿತರಿಸಲಾಯಿತು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪ್ರತಿಭಾ ಪುರಸ್ಕಾರ ವಿತರಿಸಿ, ಸಾಧಕರನ್ನು ಸನ್ಮಾನಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಎಸ್. ರಾಜ ಪೂಜಾರಿ, ಎಂ. ಮಹೇಶ್ ಹೆಗ್ಡೆ, ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷ ಶೇಖರ ಖಾರ್ವಿ, ಸಹಕಾರಿ ಸಂಘಗಳ ಉಪ ನಿಬಂಧಕಿ ಲಾವಣ್ಯ ಕೆ.ಆರ್, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕಿ ಲಲಿತಾಕ್ಷಿ, ವ್ಯವಸ್ಥಾಪಕ ವಿಶ್ವನಾಥ, ಕಂಬದಕೋಣೆ ಸಂಘದ ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಮೋಹನ್ ಪೂಜಾರಿ, ಬಿ.ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಇದ್ದರು. ಸಂಘದ ಸಿಇಒ ವಿಷ್ಣು ಆರ್. ಪೈ ಸ್ವಾಗತಿಸಿದರು. ಸುಬ್ರಹ್ಮಣ್ಯ ಪಡುಕೋಣೆ ನಿರೂಪಿಸಿದರು. ಸಂಘದ ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.