ADVERTISEMENT

ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಡೆನಿಸ್ ಡೆಸಾ ನೇಮಕ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2024, 18:27 IST
Last Updated 29 ಸೆಪ್ಟೆಂಬರ್ 2024, 18:27 IST
<div class="paragraphs"><p>ಡೆನಿಸ್ ಡೆಸಾ</p></div>

ಡೆನಿಸ್ ಡೆಸಾ

   

ಉಡುಪಿ: ಭಾರತದ ಕಥೋಲಿಕ್ ಬಿಷಪ್‌ಗಳ ಸಮ್ಮೇಳನದ (ಸಿಸಿಬಿಐ) ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ನೇಮಕಗೊಂಡಿದ್ದಾರೆ.

ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫ್ರಾನ್ಸಿಸ್ ಸೆರಾವೊ ಅಧ್ಯಕ್ಷರಾಗಿರುವ ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿಯ ಸಭೆಯು ಇದೇ 10 ಮತ್ತು 11ರಂದು ನಡೆದಿದ್ದು, ಈ ವೇಳೆ ಡೆನಿಸ್ ಡೆಸಾ ಅವರನ್ನು ನೇಮಕ ಮಾಡಲಾಗಿದೆ. ಕ್ರೈಸ್ತ ಐಕ್ಯತಾ ಆಯೋಗದ ರಾಷ್ಟ್ರೀಯ ಸಮಿತಿಯ ಸದಸ್ಯರ ಅವಧಿ 4 ವರ್ಷಗಳಾಗಿದ್ದು ಅ. 1ರಿಂದ ಆರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಡೆನಿಸ್ ಡೆಸಾ ಅವರು ಪ್ರಸ್ತುತ ಧರ್ಮಗುರುಗಳಾಗಿ ಸೇವೆ ನೀಡುತ್ತಿರುವ ತೊಟ್ಟಂ ಸಂತ ಅನ್ನಮ್ಮ ದೇವಾಲಯದ ವ್ಯಾಪ್ತಿಯಲ್ಲಿ ಎಲ್ಲಾ ಧರ್ಮಗಳ ಸದಸ್ಯರನ್ನು ಒಗ್ಗೂಡಿಸಿ, ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ರಚಿಸಿ ಮಾದರಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.