ADVERTISEMENT

ಸ್ವಾವಲಂಬಿ ಬದುಕಿಗೆ ಹೈನುಗಾರಿಕೆ ಸಹಕಾರಿ: ಕೆ.ಎಸ್.ಕಾರಂತ

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ ಸುವರ್ಣ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 5:44 IST
Last Updated 23 ಅಕ್ಟೋಬರ್ 2024, 5:44 IST
ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರು, ಕಾರ್ಯದರ್ಶಿ ಅವರನ್ನು ಸನ್ಮಾನಿಸಲಾಯಿತು
ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರು, ಕಾರ್ಯದರ್ಶಿ ಅವರನ್ನು ಸನ್ಮಾನಿಸಲಾಯಿತು   

ಸಾಲಿಗ್ರಾಮ(ಬ್ರಹ್ಮಾವರ): ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಮಂಗಳವಾರ ಸಾಲಿಗ್ರಾಮದ ಸಂಘದ ವಠಾರದಲ್ಲಿ ನಡೆಯಿತು.

ಸಂಘದ ವಿಸ್ತ್ರತ ಕಟ್ಟಡವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷ ಕೆ.ಎಸ್.ಕಾರಂತ ಉದ್ಘಾಟಿಸಿ, ‘ಸಾಲಿಗ್ರಾಮ ಹಾಲು ಉತ್ಪಾದಕರ ಸಂಘ ಅಭಿವೃದ್ಧಿ ಪಥದತ್ತ ಸಾಗಿದ್ದು, ಸ್ವಂತ ತಳಹದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಹೈನುಗಾರಿಕಾ ಕ್ಷೇತ್ರ ಸ್ವಾವಲಂಬಿ ಬದುಕಿಗೆ ಮುನ್ನಡಿ ಬರೆದಿದೆ’ ಎಂದು ಹೇಳಿದರು.

ದ.ಕ ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಜಯರಾಮ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟದ ಮಾಜಿ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಗೋಪೂಜೆ ನೆರವೇರಿಸಿದರು. ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ಗಾಣಿಗ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಇದೇ ಸಂದರ್ಭ ಸಂಘಕ್ಕೆ ಹೆಚ್ಚು ಹಾಲು ನೀಡಿದ ರಾಘವೇಂದ್ರ ಮಧ್ಯಸ್ಥ, ಬಲರಾಮ ನಕ್ಷತ್ರಿ, ರಾಜು ದೇವಾಡಿಗಗೆ ಬಹುಮಾನ ನೀಡಿ ಗೌರವಿಸಲಾಯಿತು. ಒಕ್ಕೂಟದ ಅಧಿಕಾರಿ ಅನಿಲ್ ಕುಮಾರ್ ಶೆಟ್ಟಿ, ಒಕ್ಕೂಟದ ವಿಸ್ತರಣಾಧಿಕಾರಿ ಸರಸ್ವತಿ ಮತ್ತು ಸುಜಾತಾ ಬಾಯರಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಮಾಜಿ ಅಧ್ಯಕ್ಷರು, ಮಾಜಿ ಕಾರ್ಯದರ್ಶಿಗಳು, ಸಂಘದ ಮಾಜಿ ಮುಖ್ಯಕಾರ್ಯನಿರ್ವಾಹಕರು, ಪ್ರಸ್ತುತ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಮಾಜಿ ನಿರ್ದೇಶಕರನ್ನು ಗುರುತಿಸಿ ಗೌರವಿಸಲಾಯಿತು.

ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ರವಿರಾಜ ಹೆಗ್ಡೆ, ಒಕ್ಕೂಟದ ಮಾಜಿ ಅಧ್ಯಕ್ಷ ಜಗದೀಶ ಕಾರಂತ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ನರಸಿಂಹ ಕಾಮತ್, ಎಂ.ಸುಧಾಕರ ಶೆಟ್ಟಿ, ಸ್ಮಿತಾ ಆರ್ ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕನ್ನಾರು ಕಮಲಾಕ್ಷ ಹೆಬ್ಬಾರ್, ಒಕ್ಕೂಟದ ವ್ಯವಸ್ಥಾಪಕ ರವಿರಾಜ ಉಡುಪ, ದ.ಕ ಸಹಕಾರಿ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ದ.ಕ ಸಹಕಾರಿ ಹಾಲು ಒಕ್ಕೂಟದ ಮಾಜಿ ನಿರ್ದೇಶಕಿ ಜಾನಕಿ ಹಂದೆ, ಕಾರ್ತಟ್ಟು ಅಘೋರೇಶ್ವರ ದೇವಸ್ಥಾನದ ಮುಕ್ತೇಸರ ಚಂದ್ರಶೇಖರ ಕಾರಂತ ಇದ್ದರು.

ಸಂಘದ ಮುಖ್ಯಕಾರ್ಯನಿರ್ವಾಹಕಾರಿ ಜ್ಯೋತಿ ಸುರೇಶ ನಾಯರಿ ವರದಿ ವಾಚಿಸಿದರು. ಸಂಘದ ಸದಸ್ಯ ಶ್ರೀನಿವಾಸ ಸೋಮಯಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ಸುಬ್ರಾಯ ಉರಾಳ ಸ್ವಾಗತಿಸಿದರು. ಉಪಾಧ್ಯಕ್ಷ ರಮೇಶ ಹಂದೆ ವಂದಿಸಿದರು. ಸುಜಾತಾ ಬಾಯರಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.