ADVERTISEMENT

ಉಡುಪಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಅಂಗವಿಕಲರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 8:16 IST
Last Updated 28 ಅಕ್ಟೋಬರ್ 2024, 8:16 IST
   

ಉಡುಪಿ: ಅಂಗವಿಕಲರಿಗೆ ಸರ್ಕಾರ ನೀಡುತ್ತಿರುವ ಮಾಸಾಶನವನ್ನು ಹೆಚ್ಚಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಯಿತು.

ದಿವ್ಯಾಂಗರ ರಕ್ಷಣಾ ಸಮಿತಿಯ ವಿಜಯ್ ಕೊಡವೂರು‌ ಮಾತನಾಡಿ, ರಾಜ್ಯದಲ್ಲಿ ಅಂಗವಿಕಲ ಹಕ್ಕುಗಳ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರವನ್ನು ಕುಂದಾಪುರದ ನಾಡಾದಲ್ಲಿ ಗುರುತಿಸಲಾದ ಸ್ಥಳದಲ್ಲಿ ನಿರ್ಮಿಸಲು ಮುಂದಿನ ಬಜೆಟ್‌ ನಲ್ಲಿ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಮಂಜುನಾಥ ಹೆಬ್ಬಾರ್, ರವೀಂದ್ರ ಹೆಮ್ಮಾಡಿ, ವೆಂಕಟೇಶ್, ಹರೀಶ್ ಶೆಟ್ಟಿ ಪಾಲ್ಗೊಂಡಿದ್ದರು.

ಪ್ರತಿಭಟನಾ ಸಭೆಗೂ ಮೊದಲು ಮಣಿಪಾಲದ ಕಾಯಿನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.