ADVERTISEMENT

ಉಡುಪಿಯಲ್ಲಿ ಕರಕುಶಲ ವಸ್ತುಗಳ ಮಾರಾಟ ಮಳಿಗೆ

ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 15:06 IST
Last Updated 22 ಜನವರಿ 2021, 15:06 IST
ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದ್ದ ಕರಕುಶಲ ಮೇಳದಲ್ಲಿ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಭಾಗವಹಿಸಿದ್ದರು.
ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದ್ದ ಕರಕುಶಲ ಮೇಳದಲ್ಲಿ ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಭಾಗವಹಿಸಿದ್ದರು.   

ಉಡುಪಿ: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಉಡುಪಿಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ಕರಕುಶಲ ವಸ್ತುಗಳ ಮಳಿಗೆ ಆರಂಭಿಸಲಾಗುವುದು ಎಂದು ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದರು.

ಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದ್ದ ಕರಕುಶಲ ಮೇಳದಲ್ಲಿ ಭಾಗವಹಿಸಿ ಮಾತನಾಡಿ, ಉಡುಪಿಯಲ್ಲಿ ಕರಕುಶಲ ವಸ್ತುಗಳ ಮಳಿಗೆ ಸ್ಥಾಪನೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ್ದು ಒಪ್ಪಿಗೆ ಸೂಚಿಸಿದ್ದಾರೆ. ಕುಂದಾಪುರದಲ್ಲಿ ಉತ್ಪಾದನಾ ಘಟಕ ನಿರ್ಮಾಣ ಕಾರ್ಯ ಮೂರು ತಿಂಗಳಲ್ಲಿ ಆರಂಭಗೊಳ್ಳಲಿದೆ ಎಂದರು.

ಸ್ಥಳೀಯವಾಗಿ ಉತ್ಪಾದನೆಯಾಗುವ ವಸ್ತುಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸ್ವಾವಲಂಬಿ ಬದುಕು ನಡೆಸುತ್ತಿರುವ ಕರಕುಶಲ ಕರ್ಮಿಗಳು ಉತ್ಪಾದಿಸುವ ವಸ್ತುಗಳನ್ನ್ನು ಖರೀದಿಸುವ ಮೂಲಕ ಸಾರ್ವಜನಿಕರು ಅವರಿಗೆ ಬೆಂಬಲ ನೀಡಬೇಕು. ವಿದೇಶಿ ವಸ್ತುಗಳಿಗೆ ಪ್ರೋತ್ಸಾಹ ನೀಡುವ ಬದಲು ದೇಶೀಯ ವಸ್ತುಗಳನ್ನ ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ADVERTISEMENT

ಕರಕುಶಲ ವಸ್ತುಗಳನ್ನು ತಯಾರಿಸಲು ಕುಶಲಕರ್ಮಿಗಳಿಗೆ, ಸಬ್ಸಿಡಿ ದರದಲ್ಲಿ ಗಂಧದ ಪರಿಕರ ನೀಡಲಾಗುವುದು. ಇಡೀ ರಾಜ್ಯದಲ್ಲಿ ಹೊಸದಾಗಿ 12 ಶೋರೂಂಗಳನ್ನು ಸ್ಥಾಪಿಸುವ ಉದ್ದೇಶವಿದ್ದು, ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಹಂಪಿ, ಮೈಸೂರು ಅರಮನೆ, ಬೇಲೂರು ಹಳೇಬೀಡು ಮಾದರಿಯ ವಸ್ತುಗಳನ್ನು ತಯಾರಿಸುವಂತೆ ಕರಕುಶಲ ಕರ್ಮಿಗಳಿಗೆ ಸಲಹೆ ನೀಡಿದರು.

ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.