ADVERTISEMENT

ಉಡುಪಿ: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಲಾಕಪ್‌ನಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2024, 9:34 IST
Last Updated 10 ನವೆಂಬರ್ 2024, 9:34 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಉಡುಪಿ: ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಕೇರಳದ ಕೊಲ್ಲಂ ಜಿಲ್ಲೆಯ ಬಿಜು ಮೋಹನ್‌ (45) ಮೃತಪಟ್ಟವರು.

ಚೇರ್ಕಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಕಿರುಕುಳ ನೀಡುತ್ತಿರುವುದಾಗಿ ಬ್ರಹ್ಮಾವರ ಪೊಲೀಸ್‌ ಠಾಣೆಗೆ ಶನಿವಾರ ಕರೆ ಬಂದಿತ್ತು. ಅದರಂತೆ ಪೊಲೀಸರು ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ಕೆ. ತಿಳಿಸಿದ್ದಾರೆ.

ಪೊಲೀಸ್‌ ಲಾಕಪ್‌ನಲ್ಲಿದ್ದ ವ್ಯಕ್ತಿಯು ರಾತ್ರಿ 3.45ರ ಸುಮಾರಿಗೆ ಗೋಡೆಗೆ ತಲೆಯನ್ನು ಬಡಿದುಕೊಂಡಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಆತನನ್ನು ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದೂ ವಿವರಿಸಿದರು.

ಮೃತ ವ್ಯಕ್ತಿಯು ಕೂಲಿ ಕೆಲಸಕ್ಕಾಗಿ ಬ್ರಹ್ಮಾವರಕ್ಕೆ ಬಂದಿದ್ದು, ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದೇವೆ. ಅವರು ಏನು ದೂರು ನೀಡುತ್ತಾರೆ ಎಂಬುದನ್ನು ಆಧರಿಸಿ ಮುಂದಿನ ತನಿಖೆ ನಡೆಯಲಿದೆ. ಇದು ಲಾಕಪ್‌ ಡೆತ್ ಪ್ರಕರಣವಾಗಿರುವುದರಿಂದ ಸಿಐಡಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.