ADVERTISEMENT

ಉಡುಪಿ: ದುರ್ಗಾ ದೌಡ್‌ನಲ್ಲಿ ತಲವಾರು ಪ್ರದರ್ಶನ, ವ್ಯಾಪಕ ಖಂಡನೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 15:54 IST
Last Updated 2 ಅಕ್ಟೋಬರ್ 2022, 15:54 IST
ಹಿಂದೂ ಜಾಗರಣ ವೇದಿಕೆ ಭಾನುವಾರ ನಗರದಲ್ಲಿ ದುರ್ಗಾ ದೌಡ್ ಮೆರವಣಿಗೆ ಹಮ್ಮಿಕೊಂಡಿತ್ತು.
ಹಿಂದೂ ಜಾಗರಣ ವೇದಿಕೆ ಭಾನುವಾರ ನಗರದಲ್ಲಿ ದುರ್ಗಾ ದೌಡ್ ಮೆರವಣಿಗೆ ಹಮ್ಮಿಕೊಂಡಿತ್ತು.   

ಉಡುಪಿ: ಹಿಂದೂ ಜಾಗರಣ ವೇದಿಕೆ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಮೆರವಣಿಗೆಯಲ್ಲಿ ಕಾರ್ಯಕರ್ತರು ತಲವಾರು ಹಿಡಿದು ಸಾಗಿರುವುದಕ್ಕೆ ಹಲವು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ.

ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರುಗಳ ಪ್ರದರ್ಶನ ಸಂವಿಧಾನ ವಿರೋಧಿ ನಡೆ. ಪೊಲೀಸರು ಕಾರ್ಯಕ್ರಮದ ಸಂಘಟಕರು ಹಾಗೂ ತಲವಾರು ಪ್ರದರ್ಶನ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸುಂದರ್ ಮಾಸ್ತರ್ ಒತ್ತಾಯಿಸಿದ್ದಾರೆ.

ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಝಳಪಿಸಿ ಭಯದ ವಾತಾವರಣ ಸೃಷ್ಟಿಸಿರುವವರ ಮೇಲೆ ಪ್ರಕರಣ ದಾಖಲಿಸಬೇಕು. ಸೌಹಾರ್ದ ಬದುಕಿಗೆ ಹಾಗೂ ಬಹುತ್ವದ ನೆಲವಾಗಿರುವ ಉಡುಪಿಯನ್ನು ಗೂಂಡಾ ರಾಜ್ಯ ಮಾಡಲು ಹೊರಟಿರುವ ಕೋಮುವಾದಿಗಳ ನಡೆ ಖಂಡನೀಯ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆಕ್ಷೇಪಿಸಿದ್ದಾರೆ.

ADVERTISEMENT

ಹಿಂದೂ ಜಾಗರಣ ವೇದಿಕೆಯ ದುರ್ಗಾದೌಡ್ ಮೆರವಣಿಗೆಯಲ್ಲಿ ಸಚಿವ ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್‌, ಸುಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿ ಹಲವು ನಾಯಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.