ADVERTISEMENT

ಚಿತ್ರಕಲೆ ಪರಂಪರೆಯನ್ನು ಉಳಿಸಿಕೊಂಡು ಬಂದಿದೆ: ಗಣೇಶ್ ಬೀಜಾಡಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2024, 3:12 IST
Last Updated 29 ಅಕ್ಟೋಬರ್ 2024, 3:12 IST
ಕುಂದಾಪುರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಸೋಮವಾರ ತಾಲ್ಲೂಕು ಪ್ರೌಢಶಾಲಾ ಮಕ್ಕಳ ಮತ್ತು ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಪ್ರದರ್ಶನ ಮತ್ತು ಕಾರ್ಯಗಾರದ ಉದ್ಘಾಟನೆ ನಡೆಯಿತು
ಕುಂದಾಪುರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಸೋಮವಾರ ತಾಲ್ಲೂಕು ಪ್ರೌಢಶಾಲಾ ಮಕ್ಕಳ ಮತ್ತು ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಪ್ರದರ್ಶನ ಮತ್ತು ಕಾರ್ಯಗಾರದ ಉದ್ಘಾಟನೆ ನಡೆಯಿತು   

ಕುಂದಾಪುರ: ಪ್ರಾಚೀನ ಕಾಲದಿಂದಲೂ ವೈಶಿಷ್ಟ್ಯ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಬಂದಿರುವ ಚಿತ್ರಕಲೆಗೆ ತನ್ನದೇ ಆದಂತಹ ವಿಶಿಷ್ಟ ರೀತಿಯ ಸ್ಥಾನಮಾನಗಳಿವೆ ಎಂದು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಬೀಜಾಡಿ ಹೇಳಿದ್ದಾರೆ.

ಇಲ್ಲಿನ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಸೋಮವಾರ ನಡೆದ ತಾಲ್ಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲ್ಲೂಕು ಪ್ರೌಢಶಾಲಾ ಮಕ್ಕಳ ಮತ್ತು ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಪ್ರದರ್ಶನ ಮತ್ತು ಕಾರ್ಯಗಾರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ಕುಂದಾಪುರ ಭಾಗದ ಹಲವರು, ಚಿತ್ರಕಲೆಗೆ ಕೊಟ್ಟಿರುವ ಕೊಡುಗೆಗಳು ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿದೆ.
ವಿದ್ಯಾರ್ಥಿಗಳು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗಿ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಯವನ್ನು ಕಳೆಯುತ್ತಿರುವ ದೃಷ್ಟಾಂತ ನಮ್ಮ ಮುಂದಿರುವ ಪ್ರಸ್ತುತ ಕಾಲಘಟ್ಟದಲ್ಲಿ, ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಅಚ್ಚುಕಟ್ಟಾಗಿ ಚಿತ್ರ ಬಿಡಿಸುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನಗೊಳ್ಳುವುದಕ್ಕೆ ಈ ರೀತಿಯ ಕಾರ್ಯಕ್ರಮ ದಾರಿಯಾಗುತ್ತದೆ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶೋಭಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಸಂಪನ್ಮೂಲ ಕೇಂದ್ರ ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ್ ನಾಯಕ್, ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಕಡಬ, ಕುಂದಾಪುರ ತಾಲ್ಲೂಕು ಚಿತ್ರಕಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಪ್ರಶಾಂತ್ ಬಿ.ಪಿ, ಬೋರ್ಡ್ ಹೈಸ್ಕೂಲಿನ ಸಹ ಶಿಕ್ಷಕಿ ವಿನುತಾ ಗಾಂವ್ಕರ್, ಹವ್ಯಾಸಿ ಚಿತ್ರ ಕಲಾವಿದರಾದ ಶಿವಕುಮಾರ್ ಚಿತ್ರದುರ್ಗ, ರಾಘವೇಂದ್ರ ಚಾತ್ರಮಕ್ಕಿ, ರಾಜಶೇಖರ್ ತಾಳಿಕೋಟೆ ಇದ್ದರು.

ಸಭಾ ಕಾರ್ಯಕ್ರಮದ ಮೊದಲು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಬಿಡಿಸಿದ ಚಿತ್ರಗಳ ಪ್ರದರ್ಶನವನ್ನು ಅತಿಥಿ-ಗಣ್ಯರು ವೀಕ್ಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.