ADVERTISEMENT

ಸ್ವರ್ಣ ಸಮರ್ಪಣೆಗೆ ಚಾಲನೆ, ಸ್ವರ್ಣಗೌರಿ ಪೂಜೆ

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸ್ವರ್ಣಗದ್ದುಗೆ ನಿರ್ಮಾಣ ಸಂಕಲ್ಪ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 5:47 IST
Last Updated 26 ಜೂನ್ 2024, 5:47 IST
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಮಂಗಳವಾರ ಚಾಲನೆ ನೀಡಲಾಯಿತು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಸಮಸ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಮಂಗಳವಾರ ಚಾಲನೆ ನೀಡಲಾಯಿತು.   

ಕಾಪು (ಪಡುಬಿದ್ರಿ): ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಪ್ರಯುಕ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಮಂಗಳವಾರ ಚಾಲನೆ ನೀಡಲಾಯಿತು.

ಮಾರಿಗುಡಿ ಅಭಿವೃದ್ಧಿ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಪಂಚದಾದ್ಯಂತ ನೆಲೆಸಿರುವ ಮಾರಿಗುಡಿ ಭಕ್ತರು ಪಾಲ್ಗೊಂಡರು. ದೇಗುಲದ ತಂತ್ರಿ ವಿದ್ವಾನ್ ಕೆ.ಪಿ. ಕುಮಾರಗುರು ಕೊರಂಗ್ರಪಾಡಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ  ಉಪಸ್ಥಿತಿಯಲ್ಲಿ ಸ್ವರ್ಣಗೌರಿ ಪೂಜೆಯೊಂದಿಗೆ ಸ್ವರ್ಣ ಸಮರ್ಪಣೆಗೆ ಚಾಲನೆ ದೊರಕಿತು.

ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ತಹಶೀಲ್ದಾರ್ ಡಾ.ಪ್ರತಿಭಾ ಆರ್. ಸಹಿತ ನೂರಾರು ಮಂದಿ ಗಣ್ಯರು, ಮಹಿಳೆಯರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಕಾರಣಿಕ ಪ್ರಸಿದ್ಧ, ಗದ್ದುಗೆಯೇ ಪಧಾನವಾಗಿರುವ ಹೊಸ ಮಾರಿಗುಡಿ ದೇವಸ್ಥಾನ ಭಕ್ತರ, ಅಭಿವೃದ್ಧಿ ಸಮಿತಿ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದೆ. ಇಳಿಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ, ಉಚ್ಚಂಗಿ ದೇವಿಯ 20 ಕಿಲೋ ಸ್ವರ್ಣಗದ್ದುಗೆ ಸಮರ್ಪಿಸುವುದಾಗಿ ಸಂಕಲ್ಪ ಮಾಡಲಾಗಿದೆ.

‘ಮಾರಿಗುಡಿ ಕರಾವಳಿಯ ಶ್ರದ್ಧಾಕೇಂದ್ರವಾಗಲಿ’

‘ಕಾಪು ಮಾರಿಯಮ್ಮ ದೇವಸ್ಥಾನ ಕರಾವಳಿಯ ಶ್ರದ್ಧಾಕೇಂದ್ರವಾಗಿ ಮೂಡಿ ಬರಲಿ’ ಎಂದು ಮುಂಬೈ ಹೇರಂಭ ಇಂಡಸ್ಟ್ರೀಸ್  ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು. ಅವರು ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಭಕ್ತರಿಂದ ಸಮರ್ಪಿಸಲ್ಪಡುವ ಸ್ವರ್ಣಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣಾ ಸಮಾರಂಭದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ ಅಮ್ಮನ ನುಡಿಯಂತೆ ಸ್ವರ್ಣಗದ್ದುಗೆ ಸಮರ್ಪಣೆಗೆ ಮುಂದಾಗಿದ್ದು ಕ್ಷೇತ್ರಕ್ಕೆ ಶಕ್ತಿ ಚೈತನ್ಯ ತುಂಬುವಲ್ಲಿ ಸ್ವರ್ಣಗದ್ದುಗೆ ನಿರ್ಮಾಣದ ಸಂದರ್ಭ ಬರುವ ಬಂಗಾರದ ಮಳೆ ಎಲ್ಲರ ಬದುಕಿಗೂ ಸ್ವರ್ಣಯುಗವಾಗಲಿ. ಭಕ್ತರು ಈ ಪುಣ್ಯ ಅವಕಾಶ ಸದುಪಯೋಗಪಡಿಸಿಕೊಂಡು ಸ್ವರ್ಣ ಸಮರ್ಪಿಸಿ ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ವಿನಂತಿಸಿದರು. ವಿ.ಕೆ. ಗ್ರೂಪ್‌ ಆಫ್ ಕಂಪನಿ ಮುಂಬೈ ಆಡಳಿತ ನಿರ್ದೇಶಕ ಕೆ.ಎಂ.ಶೆಟ್ಟಿ ರಿಮೋಟ್ ಬಟನ್‌ ಒತ್ತುವ ಮೂಲಕ ಸ್ವರ್ಣಗದ್ದುಗೆ ಮಾದರಿ ಅನಾವರಣಗೊಳಿಸಿದರು. ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಆಶಾ ಪ್ರಕಾಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು. ₹3.82 ಕೋಟಿ ವೆಚ್ಚದ ಅದಾನಿ ನಿರ್ಮಲ್ ಸೆಂಟರ್ ಕಟ್ಟಡ ನಿರ್ಮಿಸಿಕೊಡುವಂತೆ ಅದಾನಿ ಸಮೂಹದ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ ಅವರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಮುಂಬೈ ಹೈಕೋರ್ಟ್ ವಕೀಲ ಮಹೇಶ್ ಕೋಟ್ಯಾನ್ ಉದ್ಯಮಿಗಳಾದ ಮುಂಬೈ ಕೆ. ಪ್ರಕಾಶ್ ಶೆಟ್ಟಿ ಎಂ. ಸುಧಾಕರ್ ಹೆಗ್ಡೆ ಪ್ರಭಾಕರ ಶೆಟ್ಟಿ ಮಾನವ್ ಶಂಕರ್ ಜೋಷಿ ಭಾರತ್ ಕೊ ಆಪರೇಟಿವ್ ಬ್ಯಾಂಕ್‌ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಕೃಷ್ಣ ವೈ.ಶೆಟ್ಟಿ ಮುಂಬಯಿ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ್ ಶೆಟ್ಟಿ ಕೋಶಾಧಿಕಾರಿ ಎರ್ಮಾಳು ಚಂದ್ರಹಾಸ ಶೆಟ್ಟಿ ಪುಣೆ ಅಂತರರಾಷ್ಟ್ರೀಯ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಡಾ.ಶಿವಾನಂದ್ ಶೆಟ್ಟಿ ಒಮನ್ ಸಮಿತಿ ಅಧ್ಯಕ್ಷ ದಿವಾಕರ ಶಟ್ಟಿ ಮಸ್ಕತ್ ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ರಾಜಶೇಖರ ಕೋಟ್ಯಾನ್ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ ಕೋಶಾಧಿಕಾರಿ ಕೆ. ರವಿಕಿರಣ್ ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್ ಮನೋಹರ್ ಶೆಟ್ಟಿ ಕಾಪು ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಶೆಟ್ಟಿ ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಕ್ತರು ಇದ್ದರು. ಸ್ವರ್ಣಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ ವಂದಿಸಿದರು. ಕದ್ರಿ ನವನೀತ್ ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.