ಕಾರ್ಕಳ: ‘ಆಧುನಿಕ ಕೃಷಿ ಪದ್ಧತಿಯಲ್ಲಿ ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆಯು ಕಡಿಮೆಯಾಗುತ್ತಿದ್ದು, ಮಣ್ಣಿನ ಮಾಲಿನ್ಯ ತಡೆಯಬೇಕು’ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ರಾಘವೇಂದ್ರ ಬಿ. ಹೇಳಿದರು.
ಇಲ್ಲಿನ ಭುವನೇಂದ್ರ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗ ಆಯೋಜಿಸಿದ್ದ ‘ಮಣ್ಣಿನ ಫಲವತ್ತತೆ ಮತ್ತು ಸವಕಳಿ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಾಂಶುಪಾಲ ಮಂಜುನಾಥ ಎ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ದತ್ತಾತ್ರೇಯ ಇದ್ದರು. ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ದೀಪ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೀತಮ್ ಶೆಟ್ಟಿ ನಿರೂಪಿಸಿದರು. ಮೆಹೆಕ್ ಆಶ್ಮಾ ಸ್ವಾಗತಿಸಿದರು. ಉಪನ್ಯಾಸಕಿ ತೇಜಸ್ವಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.