ADVERTISEMENT

ಅಂತರಕಾಲೇಜು ಬಾಲ್ ಬಾಡ್ಮಿಂಟನ್–ಆಳ್ವಾಸ್ ಪ್ರಥಮ

​ಪ್ರಜಾವಾಣಿ ವಾರ್ತೆ
Published 19 ಮೇ 2024, 14:27 IST
Last Updated 19 ಮೇ 2024, 14:27 IST
ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿಶ್ವವಿದ್ಯಾನಿಲಯದ ಜಂಟೀ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿಶ್ವವಿದ್ಯಾನಿಲಯದ ಜಂಟೀ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿಗಳನ್ನು ವಿತರಿಸಲಾಯಿತು.   

ಕಾರ್ಕಳ: ಇಲ್ಲಿನ ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ದೈಹಿಕ ಶಿಕ್ಷಣ ವಿಭಾಗ ಹಾಗೂ ಮಂಗಳೂರು ವಿಶ್ವವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ನಡೆದ ಅಂತರಕಾಲೇಜು ಪುರುಷರ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡ ಎಂ.ಕೆ. ಅನಂತರಾಜ್ ಸ್ಮಾರಕ ಟ್ರೋಫಿ ಗೆದ್ದುಕೊಂಡು ಚಾಂಪಿಯನ್ ಆಯಿತು.

ಸತತ 19 ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರಕಾಲೇಜು ಪುರುಷರ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ತಂಡವು ಪ್ರಶಸ್ತಿ ಗೆಲ್ಲುತ್ತಿದೆ. ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದ್ವಿತೀಯ, ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ, ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ತಂಡ ಚತುರ್ಥ ಸ್ಥಾನ ಪಡೆದುಕೊಂಡವು. 13 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.

ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಚೇತನ್ ಬಿ.ಕೆ. ಅತ್ಯುತ್ತಮ ಆಕ್ರಮಣಕಾರಿ ಆಟಗಾರ, ನಂದನ್ ಕುಮಾರ್ ಸಿ. ಅತ್ಯುತ್ತಮ ರಕ್ಷಣಾತ್ಮಕ ಆಟಗಾರ, ಕುಶಾಲನಗರ ಸರ್ಕಾರಿ ಪ್ರಥಮ ಕಾಲೇಜಿನ ರಾಜು ಸವ್ಯಸಾಚಿ ಪ್ರಶಸ್ತಿ ಗಳಿಸಿದರು.

ADVERTISEMENT

ಸಮಾರೋಪ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಕ್ರೀಡಾಪಟು, ತರಬೇತುದಾರ ಪಿ. ಚೇತನ್ ಕುಮಾರ್, ಕಬಡ್ಡಿ ತರಬೇತುದಾರ ಶಶಿಧರ್ ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾಕೂಟದ ವೀಕ್ಷಕ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ ಅಭಿನಂದಿಸಿದರು.

ಕಾಲೇಜಿನ ಪ್ರಾಚಾರ್ಯ ಕಿರಣ್ ಎಂ. ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಕಾರ್ಯದರ್ಶಿ ವಿನ್ಯಾಸ್ ಇದ್ದರು. ಭುವನೇಂದ್ರ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್‌ಚಂದ್ರ ಸಹಕರಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಅವಿನಾಶ್ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಜಯಭಾರತಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.