ADVERTISEMENT

ಕಾರ್ಕಳ | ನಕಲಿ ಪರಶುರಾಮ ಮೂರ್ತಿ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 22 ಜೂನ್ 2024, 16:17 IST
Last Updated 22 ಜೂನ್ 2024, 16:17 IST
ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಕುರಿತ ಪೂರ್ವಭಾವಿ ಸಭೆಯಲ್ಲಿ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿದರು
ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆಯ ಕುರಿತ ಪೂರ್ವಭಾವಿ ಸಭೆಯಲ್ಲಿ ಸಚಿವ ವಿ. ಸುನಿಲ್ ಕುಮಾರ್ ಮಾತನಾಡಿದರು   

ಕಾರ್ಕಳ (ಉಡುಪಿ): ತಾಲ್ಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿ ಮಾಡಿ ಕೊಡಲು ₹1.25 ಕೋಟಿ ಪಡೆದು, ನಕಲಿ ಮೂರ್ತಿಯನ್ನು ಮಾಡಿ ಕೊಟ್ಟು ಮೋಸ ಮಾಡಿದ್ದಾರೆ ಎಂಬ ಆರೋಪದಲ್ಲಿ ಕೃಷ್ಣ ಆರ್ಟ್ ವರ್ಲ್ಡ್‌ನ ಕೃಷ್ಣ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿರುವ ಕೃಷ್ಣ ಅವರು ಸರ್ಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ನಲ್ಲೂರು ಗ್ರಾಮದ ಕೃಷ್ಣ ಎನ್ನುವವರು ಕಾರ್ಕಳ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT