ADVERTISEMENT

ಕಾರ್ಕಳ: ಪರಶುರಾಮ ಮೂರ್ತಿ ಶಿಲ್ಪಿ ಕೃಷ್ಣ ನಾಯ್ಕ ಬಂಧನ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 0:33 IST
Last Updated 11 ನವೆಂಬರ್ 2024, 0:33 IST
<div class="paragraphs"><p>ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲೆ ಸ್ಥಾಪಿಸಿದ್ದ ಪರಶುರಾಮ ಮೂರ್ತಿ</p></div>

ಬೈಲೂರಿನ ಉಮಿಕ್ಕಳ ಬೆಟ್ಟದ ಮೇಲೆ ಸ್ಥಾಪಿಸಿದ್ದ ಪರಶುರಾಮ ಮೂರ್ತಿ

   

ಕಾರ್ಕಳ: ತಾಲ್ಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್‌ನ ಪರಶುರಾಮ ಮೂರ್ತಿ ನಿರ್ಮಾಣ ಮಾಡಿದ ಶಿಲ್ಪಿ, ‘ಕೃಷ್ ಆರ್ಟ್ ವರ್ಲ್ಡ್‌’ನ ಕೃಷ್ಣ ನಾಯ್ಕ (45) ಅವರನ್ನು ನಗರ ಪೊಲೀಸರು ಶನಿವಾರ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ.

ಕೃಷ್ಣ ನಾಯ್ಕ ವಿರುದ್ಧ, ಕೃಷ್ಣ ಶೆಟ್ಟಿ ಬಜಗೋಳಿ ಅವರು ನೀಡಿರುವ ದೂರಿಗೆ ಸಂಬಂಧಿಸಿ, ನ. 4ರಂದು ವಿಚಾರಣೆ ನಡೆಸಿದ್ದ ಕಾರ್ಕಳ ನ್ಯಾಯಾಲಯದ ನ್ಯಾಯಾಧೀಶರು, ನ.7ರಂದು ಕೃಷ್ಣ ನಾಯ್ಕ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ್ದರು. ಅದರ ಬೆನ್ನಲ್ಲೇ ಪೊಲೀಸರು ಕೃಷ್ಣ ಅವರನ್ನು ಬಂಧಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.