ADVERTISEMENT

ನಿಟ್ಟೆ: 'ಶಿಬಿರದಲ್ಲಿ 485 ಯುನಿಟ್ ರಕ್ತ ಸಂಗ್ರಹ'

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 5:07 IST
Last Updated 26 ನವೆಂಬರ್ 2024, 5:07 IST
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್ ಎಂ.ಎ.ಎಂ ತಾಂತ್ರಿಕ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್ ಎಂ.ಎ.ಎಂ ತಾಂತ್ರಿಕ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು   

ಕಾರ್ಕಳ: ಮಾನವ ಜನಾಂಗವು ರಕ್ತ ಹಾಗೂ ಜೀವದ ಮಹತ್ವವನ್ನರಿತು ರಕ್ತದಾನದಲ್ಲಿ ಪಾಲ್ಗೊಳ್ಳಬೇಕು’ ಎಂದು ಲಯನ್ಸ್ ಜಿಲ್ಲೆ 317 ಸಿ ಯ ಜಿಲ್ಲಾ ರಕ್ತದಾನ ಸಂಯೋಜಕ ಆನಂದ ಗಾಣಿಗ ಹೇಳಿದರು.

ನಿಟ್ಟೆ ಎನ್‌ಎಂಎಎಂ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಸೊಸೈಟಿ, ಎನ್‌ಸಿಸಿ ನೇವಲ್‌ ಉಪಘಟಕ, ಮೆಕ್ಯಾನಿಕಲ್ ವಿಭಾಗದ ಎಐಎಂಎಸ್ ಘಟಕ, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಿರಿಯಡ್ಕ, ಲಯನ್ಸ್ ಕ್ಲಬ್ ಬಪ್ಪನಾಡು, ಎಚ್ಚ್‌ಡಿಎಫ್‌ಸಿ ಬ್ಯಾಂಕ್, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ಮಾತನಾಡಿ ವರ್ಷದಲ್ಲಿ ಎರಡು ಬಾರಿ ರಕ್ತದಾನ ಶಿಬಿರ ನಡೆಸುವ ಚಿಂತನೆ ಇದೆ ಎಂದರು.

ADVERTISEMENT

ನಿಟ್ಟೆ ಕ್ಯಾಂಪಸ್ ನಿರ್ವಹಣೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕ ಯೋಗೀಶ್ ಹೆಗ್ಡೆ, ನಿಟ್ಟೆ ರೋಟರಿ ಕ್ಲಬ್‌ ಅಧ್ಯಕ್ಷ ಸತೀಶ್ ಕುಮಾರ್ ಕೆ, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ್ ಹೆಗ್ಡೆ, ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್, ಎಚ್‌ಡಿಎಫ್‌ಸಿ ಬ್ಯಾಂಕ್ ಅಧಿಕಾರಿ ಹಿತೇಶ್, ನಿಟ್ಟೆ ರೆಡ್‌ಕ್ರಾಸ್‌ನ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್‌ಸಿಸಿ ಅಧಿಕಾರಿ ಶಿವಪ್ರಸಾದ್ ಶೆಟ್ಟಿ, ಎಐಎಂಎಸ್ ಸಂಯೋಜಕ ಗ್ರೈನಲ್, ಎನ್‌ಎಸ್‌ಎಸ್ ಅಧಿಕಾರಿ ಶ್ರೀನಿವಾಸ ನೆಕ್ಕಾರ್ ಇದ್ದರು.

ವರ್ಷಾ ಶೆಟ್ಟಿ ಸ್ವಾಗತಿಸಿದರು. ಶ್ರಾವ್ಯಾ ಶೆಟ್ಟಿ ವಂದಿಸಿದರು. ಅಖಿಲ್ ನಿರೂಪಿಸಿದರು. ಒಟ್ಟು 485 ಯುನಿಟ್ ರಕ್ತವನ್ನು ಸಂಗ್ರಹವಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.