ADVERTISEMENT

ಹಿಜಾಬ್ ಧರಿಸಿ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಕೊಡಿ: ಅಲಿಯಾ ಅಸಾದಿ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 12:38 IST
Last Updated 14 ಏಪ್ರಿಲ್ 2022, 12:38 IST

ಉಡುಪಿ: ಏ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯ ಹಾಳಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ತೆಗೆದುಕೊಳ್ಳಬೇಕು ಎಂದು ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸಾದಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಇನ್ನೂ ಕಾಲಾವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅನುಕೂಲ ಮಾಡಿಕೊಡಬೇಕು. ನಾವು ದೇಶದ ಭವಿಷ್ಯ ಎಂದು ಅಲಿಯಾ ಅಸಾದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT