ಉಡುಪಿ: ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದೆ.
ಬಿರುಸಿನ ಮಳೆಯ ಕಾರಣ ಬೈಂದೂರು ಹಾಗೂ ಹೆಬ್ರಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 18ರಂದು) ರಜೆ ಘೋಷಿಸಲಾಗಿದೆ.
ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಬೈಂದೂರು ವ್ಯಾಪ್ತಿಯಲ್ಲಿ ಕೆಲವೆಡೆ ನೆರೆ ನೀರು ಇಳಿಕೆಯಾಗಿಲ್ಲ.
ಉಡುಪಿಯಲ್ಲಿ ಗುರುವಾರ ಬೆಳಿಗ್ಗೆ ಭಾರಿ ಮಳೆ ಸುರಿದ ಕಾರಣ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ತೆರಳುವವರಿಗೆ ತೊಂದರೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.