ADVERTISEMENT

ಕೊಲ್ಲೂರು: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 7 ಜುಲೈ 2024, 16:24 IST
Last Updated 7 ಜುಲೈ 2024, 16:24 IST
ಕುಂದಾಪುರ ಸಮೀಪದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ 2023-24 ನೆ  ಶೈಕ್ಷಣಿಕ ಸಾಲಿನ ಪ್ರತಿಭಾನ್ವೀತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕುಂದಾಪುರ ಸಮೀಪದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ 2023-24 ನೆ  ಶೈಕ್ಷಣಿಕ ಸಾಲಿನ ಪ್ರತಿಭಾನ್ವೀತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.   

ಕುಂದಾಪುರ: ಕೊಲ್ಲೂರಿನ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ 2023–24ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 51 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ, ಕಾಲೇಜಿನ ಶಿಸ್ತು ಇತರ ವಿದ್ಯಾರ್ಥಿಗಳಿಗೆ ಮಾದರಿ. ಮೂಕಾಂಬಿಕಾ ಪದವಿಪೂರ್ವ ಕಾಲೇಜು ಜಿಲ್ಲೆಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿದ್ದು, ಇಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರು ಎಂದು ಬಣ್ಣಿಸಿದರು.

ಸಂಸ್ಥೆಯ ಹಳೆವಿದ್ಯಾರ್ಥಿ ಸಿಎ ಸುದೀಪ್ ಶೆಟ್ಟಿ ಕೊಡಮಾಡಿದ ಬೆಳ್ಳಿಯ ನಾಣ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಉಡುಗೊರೆಯಾಗಿ ನೀಡಲಾಯಿತು. ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಆಂಗ್ಲಭಾಷಾ ಉಪನ್ಯಾಸಕಿ ಪೂರ್ಣಿಮಾ ಎನ್.ಜೋಯಿಸ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಎಂ. ವಾಸುದೇವ ಉಡುಪ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಗಣಕವಿಜ್ಞಾನ ಉಪನ್ಯಾಸಕ ರಾಮ ನಾಯಕ್ ಕೆ.ಬಿ. ವಂದಿಸಿದರು, ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಬಿ.ಶೆಟ್ಟಿ ನಿರೂಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.