ಉಡುಪಿ: 2020ನೇ ಸಾಲಿನ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಟತಟ್ಟು ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದರು.
ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅ.10ರಂದು ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದಿಂದ 2005ರಿಂದ ಪ್ರಶಸ್ತಿ ನೀಡಲಾಗುತ್ತಿದೆ. ರವಿ ಬೆಳಗೆರೆ, ವೀರಪ್ಪಮೊಯ್ಲಿ, ನಿವೃತ್ತ ನ್ಯಾಯಮೂರ್ತಿ ವೆಂಕಟಾಚಲಯ್ಯ, ಗಿರೀಶ್ ಕಾಸರವಳ್ಳಿ, ಸಾಲುಮರದ ತಿಮ್ಮಕ್ಕ, ನಟ ಪ್ರಕಾಶ್ ರೈ ಸಹಿತ 15 ಸಾಧಕರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೋಟ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ ಆಚಾರ್ಯ, ಕೋಟ ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್, ಕೋಟತಟ್ಟು ಪಂಚಾಯಿತಿ ಪಿಡಿಒ ಶೈಲಾ ಎಸ್. ಪೂಜಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.