ಕುಂದಾಪುರ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ನೇಮಕಗೊಂಡಿದ್ದಾರೆ.
ಬಿ.ಇ ಪದವೀಧರರಾಗಿರುವ ಅವರು, ಕ್ರಾಸ್ಟೊ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕ. ಪ್ರಸ್ತುತ ಶೆವೋಟ್ ಪ್ರತಿಷ್ಠಾನದ ಅಧ್ಯಕ್ಷರಾಗಿ, ರೋಜರಿ ಕ್ರೆಡಿಟ್ ಕೊ– ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮೊಹಮ್ಮದ್ ಅಲ್ಫಾಜ್ ಅವರನ್ನು ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.