ADVERTISEMENT

Video | ನಕ್ಸಲ್‌ ನಿಗ್ರಹ ನೆಪದಲ್ಲಿ ಮುಗ್ಧರಿಗೆ ಪೊಲೀಸರಿಂದ ಕಿರುಕುಳ: ಆರೋಪ

ಪ್ರಜಾವಾಣಿ ವಿಶೇಷ
Published 22 ನವೆಂಬರ್ 2024, 14:18 IST
Last Updated 22 ನವೆಂಬರ್ 2024, 14:18 IST

ಉಡುಪಿಯ ಹೆಬ್ರಿ ತಾಲ್ಲೂಕಿನ ಪೀತುಬೈಲ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್ ಮುಖಂಡ ವಿಕ್ರಂ ಗೌಡ ಬಾಡಿಗೆಗೆ ಇದ್ದ ಮನೆಯ ಮಾಲೀಕ ಜಯಂತ ಗೌಡ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ಅವರ ಪತ್ನಿ ಗಿರಿಜಾ ತಿಳಿಸಿದ್ದಾರೆ. ಇದೇ ವೇಳೆ, ನಕ್ಸಲ್‌ ನಿಗ್ರಹ ನೆಪದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅಮಾಯಕರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರಗೌಡ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.