ADVERTISEMENT

ಕೋಟಕ್ಕೆ ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯ ಶಂಕರ್

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2024, 14:28 IST
Last Updated 7 ನವೆಂಬರ್ 2024, 14:28 IST
ಸಿ.ಎಚ್.ವಿಜಯ ಶಂಕರ್
ಸಿ.ಎಚ್.ವಿಜಯ ಶಂಕರ್   

ಕೋಟ(ಬ್ರಹ್ಮಾವರ): ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್ ಸಹಯೋಗದಲ್ಲಿ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ. 10ರಂದು ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯ್ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭ ಚಿಂತಕ ಮೈಸೂರಿನ ಪ್ರೊ.ಕೃಷ್ಣೇಗೌಡಗೆ ‘ಕಾರಂತ ಹುಟ್ಟೂರು ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಸುನಿಲ್ ಕುಮಾರ್, ಗುರುರಾಜ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಎ ಸುವರ್ಣ, ವಿಧಾನಪರಿಷತ್ ಶಾಸಕ ಮಂಜುನಾಥ ಭಂಡಾರಿ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕಿಶೋರ್ ಕುಮಾರ್, ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಸತೀಶ ಕುಂದರ್, ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕ ಯು.ಎಸ್‌.ಶೆಣೈ ಭಾಗವಹಿಸುವರು ಎಂದು ಡಾ.ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.