ಹೆಬ್ರಿ: ತಾಲ್ಲೂಕಿನ ಶಿವಪುರ ಕೆರೆಬೆಟ್ಟಿನಲ್ಲಿ ಪಶುಪಾಲನಾ ಇಲಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ಜಿಲ್ಲಾ ಮಟ್ಟದ ಸರ್ಕಾರಿ ಗೋಶಾಲೆಯ ಕಾಮಗಾರಿಯನ್ನು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಗುರುವಾರ ವೀಕ್ಷಿಸಿದರು.
‘ಜಮೀನಿಗೆ ಸಂಪೂರ್ಣ ಬೇಲಿಯ ನಿರ್ಮಾಣ, ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ, ಹುಲ್ಲುಗಾವಲು ಸೇರಿ ಎಲ್ಲ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಿ ಗೋಶಾಲೆಯನ್ನು ಆರಂಭಿಸಿ, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆಯಾಗದಂತೆ ಮುನ್ನಡೆಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕೆಜಿ, ಮುಖಂಡರಾದ ಗುರುದಾಸ ಶೆಣೈ, ಶಿವಪುರ ಸುರೇಶ ಶೆಟ್ಟಿ, ರಮೇಶ್ ಕುಮಾರ್ ಶಿವಪುರ, ಬಿಜೆಪಿ ಘಟಕದ ಅಧ್ಯಕ್ಷ ಮಹಾವೀರ ಹೆಗ್ಡೆ, ಪಂಚಾಯತಿ ಸದಸ್ಯರು, ಪಶುಪಾಲನಾ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ವಿಶ್ವೇಶಕೃಷ್ಣ ಗೋಶಾಲೆಗೆ ಭೇಟಿ: ಗಿಲ್ಲಾಳಿಯಲ್ಲಿರುವ ಪೇಜಾವರ ಮಠದ ವಿಶ್ವೇಶಕೃಷ್ಣ ಗೋಶಾಲೆಗೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ, ದಾರಿದೀಪದ ವ್ಯವಸ್ಥೆ ಮಾಡಲಾಗುವುದು ಎಂದರು. ಗೋಶಾಲೆಯ ಟ್ರಸ್ಟಿಗಳಾದ ಗುರುದಾಸ ಶೆಣೈ, ಗಿಲ್ಲಾಳಿ ಪದ್ಮನಾಭ ಆಚಾರ್ಯ, ವಿಷ್ಣುಮೂರ್ತಿ ಆಚಾರ್ಯ, ವಿಷ್ಣುಮೂರ್ತಿ ನಾಯಕ್ ಸಹಿತ ಪ್ರಮುಖರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.