ಕೋಟ(ಬ್ರಹ್ಮಾವರ): ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟತಟ್ಟು ಪಡುಕೆರೆ ಅರಮದೇವಸ್ಥಾನ ಬಳಿ ಖಾಸಗಿ ಮೀನು ಕಟ್ಟಿಂಗ್ ಶೆಡ್ ಮೇಲೆ ಉಡುಪಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದ ಘಟನೆ ನಡೆದಿದೆ.
ಕಾರ್ಮಿರ ಬಗ್ಗೆ ಆರೋಗ್ಯ ಮಾಹಿತಿ ಪಡೆಯಲು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸಲಹೆಯ ಮೇರೆಗೆ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸುವ ಸಂದರ್ಭ ಬಾಲಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ.
ಕಾರ್ಖಾನೆಯ ಮುಖ್ಯಸ್ಥರಿಗೆ ಮಕ್ಕಳನ್ನು ಸ್ಥಳಾಂತರಿಸಲು ಸಲಹೆ ನೀಡಿ ಅಲ್ಲಿರುವ ತಾಯಂದಿರ ಆರೋಗ್ಯ ವಿಚಾರಿಸಿ ಸಿಬ್ಬಂದಿ ಹಿಂದಿರುಗಿದ್ದರು. ನಂತರ ಉಡುಪಿ ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಸ್ಥಳೀಯ ಪಂಚಾಯಿತಿ ಸೇರಿದಂತೆ ಇತರ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬಾಲಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಕುರಿತು ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡು ಮಕ್ಕಳನ್ನು ಉಡುಪಿ ನಿಟ್ಟೂರಿನ ಬಾಲಾಶ್ರಮಕ್ಕೆ ಸ್ಥಳಾಂತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.