ADVERTISEMENT

‘ಕನ್ನಡ ಮಾಧ್ಯಮ; ವಿದ್ಯಾರ್ಥಿಗಳು ಉನ್ನತ ಸ್ಥಾನ’

ನಂದಳಿಕೆ : ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 4:30 IST
Last Updated 29 ಡಿಸೆಂಬರ್ 2022, 4:30 IST
ಕಾರ್ಕಳ ತಾಲ್ಲೂಕಿನ ನಂದಳಿಕೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘ ಹಾಗೂ ಶತಮಾನೋತ್ಸವ ಸಮಿತಿಯ ವತಿಯಿಂದ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ನಡೆದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನದಲ್ಲಿ ನಿವೃತ್ತ ಪ್ರಾಂಶುಪಾಲ ಜಯಂತ್ ರಾವ್.ಪಿಲಾರ್ ದೀಪ ಬೆಳಗಿದರು
ಕಾರ್ಕಳ ತಾಲ್ಲೂಕಿನ ನಂದಳಿಕೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘ ಹಾಗೂ ಶತಮಾನೋತ್ಸವ ಸಮಿತಿಯ ವತಿಯಿಂದ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ನಡೆದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನದಲ್ಲಿ ನಿವೃತ್ತ ಪ್ರಾಂಶುಪಾಲ ಜಯಂತ್ ರಾವ್.ಪಿಲಾರ್ ದೀಪ ಬೆಳಗಿದರು   

ಕಾರ್ಕಳ : ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಏರುತ್ತಿದ್ದಾರೆ. ಶಾಲೆಯ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಜೊತೆಯಲ್ಲಿ ಹಳೆ ವಿದ್ಯಾರ್ಥಿಗಳ ಸಹಕಾರವೂ ಅಗತ್ಯ ಎಂದು ನಿವೃತ್ತ ಪ್ರಾಂಶುಪಾಲ ಜಯಂತ್ ರಾವ್.ಪಿಲಾರ್ ಹೇಳಿದರು.

ತಾಲ್ಲೂಕಿನ ನಂದಳಿಕೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘ ಹಾಗೂ ಶತಮಾನೋತ್ಸವ ಸಮಿತಿಯ ವತಿಯಿಂದ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ವಿವಿಧ ಸಾಂಸ್ಕೃತಿಕ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ಉಪನ್ಯಾಸಕ ಬಿ. ಸೀತಾರಾಮ್ ಭಟ್ ಮಾತನಾಡಿ, ‘ಶಿಕ್ಷಣ ವ್ಯವಸ್ಥೆ ಬದಲಾಗುತ್ತಿದೆ. ಕನ್ನಡ
ಮಾಧ್ಯಮ ಶಾಲೆಗಳು ಕಡಿಮೆಯಾಗು
ತ್ತಿವೆ. ಇದು ಬೇಸರದ ಸಂಗತಿ’ ಎಂದರು.

ADVERTISEMENT

ದೈಜಿವರ್ಲ್ಡ್ ಸಂಸ್ಥೆಯ ಮುಖ್ಯಸ್ಥ ವಾಲ್ಟರ್ ನಂದಳಿಕೆ ಮಾತನಾಡಿ, ಕನ್ನಡ ಮಾಧ್ಯಮ ಎಂಬ ಕೀಳರಿಮೆ ಬೇಡ. ಅಂಕ ಗಳಿಕೆ ಮಾತ್ರ ಶಿಕ್ಷಣವಲ್ಲ. ಜೀವನದಲ್ಲಿ ಸಾಧನೆ ತೋರುವುದು ನಿಜವಾದ ಶಿಕ್ಷಣ ಎಂದರು.

ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆ, ಬೆಳ್ಮಣ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಬಾಲಕೃಷ್ಣ ರಾವ್ ಶುಭ ಹಾರೈಸಿದರು.

ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಎನ್.ಬಾಲಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂಬೈ ಸಮಿತಿಯ ಗೌರವಾಧ್ಯಕ್ಷ ಕೃಷ್ಣಧಾಮ ಕಾಪಿಕೆರೆ ಕೃಷ್ಣ ವೈ.ಶೆಟ್ಟಿ, ವಿದ್ಯಾ ವಿಕಾಸ ಸಮಿತಿಯ ಶಶಿಧರ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕ ಕರುಣಾಕರ್ ನಾಯ್ಕ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ವೀಣಾ, ಹಳೆವಿದ್ಯಾರ್ಥಿ ಸಂಘ ಅಧ್ಯಕ್ಷ ಸುಭಾಷ್ ಕುಮಾರ್, ಕರಾಟೆ ಶಿಕ್ಷಕ ಸತೀಶ್ ಬೆಳ್ಮಣ್ ಮತ್ತಿತರರು ಇದ್ದರು.

ತುಕಾರಾಮ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣಪತಿ ಆಚಾರ್ಯ ನಿರೂಪಿಸಿದರು. ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿತ್ಯಾನಂದ ಅಮೀನ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.