ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ’ಫಾ.ಎಫ್.ಪಿ.ಎಸ್ ಮೋನಿಸ್’ ಸಭಾಂಗಣದಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಭುವನೇಂದ್ರ ಪ್ರೌಢಶಾಲೆಯ ಗಣಿತ ಶಿಕ್ಷಕ ನಾರಾಯಣ ಶೆಣೈ ಅವರಿಗೆ ’ಶಿಕ್ಷಕ ರತ್ನ’ ಮತ್ತು ಮುನಿಯಾಲು ಕರ್ನಾಟಕ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಭಾರತಿ ಅವರಿಗೆ ’ ಕ್ರೀಡಾ ಶಿಕ್ಷಕ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಪುಂಡಲೀಕ ಮರಾಠೆ ಮಕ್ಕಳು ಒಳ್ಳೆಯ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಾಧನೆಯ ಹಾದಿಯಲ್ಲಿ ನಡೆಯಬೇಕು ಎಂದರು.
ಆಡಳಿತ ಮಂಡಳಿಯ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್, ಶಿಕ್ಷಕರು ಮಕ್ಕಳ ಋಣಾತ್ಮಕ ಅಂಶಗಳನ್ನು ದೂರ ಮಾಡಿ ಸುಂದರ ವ್ಯಕ್ತಿತ್ವ ನಿರ್ಮಾಣ ಮಾಡುತ್ತಾರೆ ಎಂದರು.
ಪದವಿಪೂರ್ವ ಕಾಲೇಜು ವಿಭಾಗದ ಅಧ್ಯಕ್ಷ ವಿವೇಕಾನಂದ ಶೆಣೈ ಅಧ್ಯಕ್ಷತೆ ವಹಿಸಿದ್ದರು.ಗಣಿತ ಉಪನ್ಯಾಸಕಿ ಭಾರತಿ, ಚಿತ್ರಕಲಾ ಶಿಕ್ಷಕ ಸದಾನಂದ ಅವರನ್ನು ಸನ್ಮಾನಿಸಲಾಯಿತು. ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯ ಜೆರಾಲ್ಡ್ ಡಿ’ಸಿಲ್ವ, ಸಂಸ್ಥೆಯ ಶಿಕ್ಷಕ - ರಕ್ಷಕ ಸಂಘದ ಪ್ರೌಢಶಾಲಾ ವಿಭಾಗದ ಅಧ್ಯಕ್ಷ ಅಬ್ಬೂಬಕ್ಕರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕ ಮೇರಿಯನ್ ಡಿ’ಸೋಜ, ಶಿಕ್ಷಕ ರಕ್ಷಕ ಸಂಘದ ಅಜಿತ್ ಹೆಗ್ಡೆ ಇದ್ದರು. ಉದಯರವಿ ಸ್ವಾಗತಿಸಿದರು. ಹೇಮಲತಾ, ಕವಿತಾ ನಿರೂಪಿಸಿದರು. ಶಕೀಲಾ ಶೆಟ್ಟಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.