ADVERTISEMENT

ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ: ಅತುಲ್‌ ರಾವ್‌ ಖುಲಾಸೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2024, 19:52 IST
Last Updated 12 ಜೂನ್ 2024, 19:52 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಉಡುಪಿ: ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿರುವ ಪ್ರಕಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಅವರನ್ನು ಖುಲಾಸೆಗೊಳಿಸಿ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ.

2008 ಜೂನ್‌ 10ರಂದು ಪದ್ಮಪ್ರಿಯ ಅವರು ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ರಘುಪತಿ ಭಟ್‌ ಸ್ನೇಹಿತ ಅತುಲ್‌ ರಾವ್‌ ಅವರ ವಿರುದ್ಧ 2008 ಜೂನ್‌ 19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ADVERTISEMENT

ಈ ಕುರಿತು ತನಿಖೆ ನಡೆಸಿದ್ದ ಸಿಒಡಿ ಅಧಿಕಾರಿಗಳು ಅತುಲ್‌ ಅವರ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯವು 2023ರ ನ.10ರಂದು ಅತುಲ್‌ ರಾವ್‌ಗೆ ಒಂದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಇದರ ವಿರುದ್ದ ಅತುಲ್‌ ಅವರು ಡಿಸೆಂಬರ್‌ ತಿಂಗಳಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ದಿನೇಶ್‌ ಹೆಗ್ಡೆ ಅವರು ಅತುಲ್‌ ಅವರನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಅತುಲ್‌ ಅವರ ಪರವಾಗಿ ವಕೀಲರಾದ ಅರುಣ್‌ ಬಂಗೇರ ಹಾಗೂ ಸ್ಟೀವನ್‌ ಲೂಯಿಸ್‌ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.