ಪಡುಬಿದ್ರಿ: ‘ಮೌಲ್ಯಾಧಾರಿತ ಶಿಕ್ಷಣದಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ’ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.
ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಮಂಗಳೂರು ಅಧೀನದ ಮೂಳೂರು ಅಲ್ ಇಹ್ಸಾನ್ ಸಮೂಹ ಶಿಕ್ಷಣ ಸಂಸ್ಥೆಗೆ ಗುರುವಾರ ಭೇಟಿ ನೀಡಿ ಅವರು ಮಾತನಾಡಿದರು.
ದಕ್ಷಿಣ ಕರ್ನಾಟಕ ಸುನ್ನಿಸೆಂಟರ್ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕವಾಗಿ ನೀಡುತ್ತಿರುವ ಕ್ರಾಂರತಿಕಾರಿಕ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ಪೀಕರ್ ನಿರೀಕ್ಷೆ ಇರಲಿಲ್ಲ: ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣ ಹೊಂದಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಆಗಿಂದಲೇ ಹೋರಾಟ ನಡೆಸಿದ್ದೇನೆ. ನಾನು ಎಂದು ನಾಯಕನಾಗಲು ಇಚ್ಚಿಸಲಿಲ್ಲ. ಶಾಸಕನಾಗುವ ನಿರೀಕ್ಷೆಯೂ ನನಗೆ ಇರಲಿಲ್ಲ. ಅವಕಾಶ ಬಂದಾಗ ಸ್ವೀಕರಿಸಿದ್ದೇನೆ. ಇದಕ್ಕೆ ತುಳುನಾಡಿನ ಸರ್ವಧಮೀರ್ಯರ ಆಶೀರ್ವಾದವೇ ಮುಖ್ಯ ಕಾರಣ ಎಂದು ಯು.ಟಿ.ಖಾದರ್ ಹೇಳಿದರು.
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಭ್ರಷ್ಟಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಎಲ್ಲ ಕಡೆಗಳಲ್ಲೂ ಭ್ರಷ್ಟಾಚಾರವಿಲ್ಲ. ಉತ್ತಮ ಶಿಕ್ಷಣದಿಂದ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಸಾಧ್ಯವಿದೆ. ಅದಕ್ಕಾಗಿಯೇ ಆರ್‌ಟಿಐ ಕಾಯ್ದೆ ಇದೆ ಎಂದರು.
ಇದೇ ಸಂದರ್ಭದಲ್ಲಿ ಅಲ್‌ಇಹ್ಸಾನ್ ಸಮೂಹ ಶಿಕ್ಷಣ ಸಂಸ್ಥೆ, ಡಿಕೆಎಸ್‌ಸಿ ವತಿಯಿಂದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಶಿಕ್ಷಣ ಅವರನ್ನು ಸನ್ಮಾನಿಸಲಾಯಿತು. ಸರ್ಕಾರದ ಅನುದಾನಕ್ಕೆ ಶಿಕ್ಷಣ ಸಂಸ್ಥೆಯಿಂದ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮೂಳೂರು ಅಲ್ ಇಹ್ಸಾನ್ ಎಜುಕೇಷನ್ ಸೆಂಟರ್‌ನ ಉಪಾಧ್ಯಕ್ಷ ಇಸ್ಮಾಯಿಲ್ ಹಾಜಿ ಕಿನ್ಯಾ ಅಧ್ಯಕ್ಷತೆ ವಹಿಸಿದ್ದರು. ಡಿಕೆಎಸ್‌ಸಿ ಸಂವಹನ ಕಾರ್ಯದರ್ಶಿ ಕೆ.ಎಚ್.ರಫೀಕ್, ಅಲ್ ಇಹ್ಸಾನ್ ಸಮೂಹ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಪ್ರೊ. ಯೂಸುಫ್ ಇದ್ದರು.
ವ್ಯವಸ್ಥಾಪಕ ಮುಸ್ತಾಫಾ ಸಅದಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವೈ.ಬಿ.ಸಿ ಬಶೀರ್ ಅಲಿ ವಂದಿಸಿದರು. ಸಹ ಶಿಕ್ಷಕ ಕಲಂದರ್ ಶಾಫಿ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.