ADVERTISEMENT

ಪಡುಬಿದ್ರಿ ದೇಗುಲ ಜೀರ್ಣೋದ್ಧಾರ | ‘₹20 ಕೋಟಿಯಲ್ಲಿ ಮೊದಲ ಹಂತದ ಪುನರ್‌ನಿರ್ಮಾಣ’

ಪಡುಬಿದ್ರಿ ದೇಗುಲ ಜೀರ್ಣೋದ್ಧಾರ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 5:55 IST
Last Updated 24 ಅಕ್ಟೋಬರ್ 2024, 5:55 IST
ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ನಡೆದ ಭಕ್ತರ ವಿಶೇಷ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿದರು
ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ನಡೆದ ಭಕ್ತರ ವಿಶೇಷ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿದರು   

ಪಡುಬಿದ್ರಿ: ಇಲ್ಲಿನ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ಬುಧವಾರ ಸಂಜೆ ನಡೆದ ನಡೆದ ಭಕ್ತರ ವಿಶೇಷ ಸಭೆಯಲ್ಲಿ 2025ರ ಏಪ್ರಿಲ್ 3ರಂದು ಬಾಲಾಲಯ ಪ್ರತಿಷ್ಠೆ, ಮಾರ್ಚ್‌ನಲ್ಲಿ ಬ್ರಹ್ಮಕಲಶಾದಿ ಕಾರ್ಯ ನಡಸಲು ಗ್ರಾಮಸ್ಥರ ಒಮ್ಮತದಿಂದ ದಿನ ನಿಗದಿ ಪಡಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ದೇವಸ್ಥಾನದ ಜೀರ್ಣೋದ್ಧಾರ ಎರಡು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ₹20 ಕೋಟಿ ವೆಚ್ಚದಲ್ಲಿ ನಡೆಯಲಿದೆ ಎಂದು ರೂಪುರೇಷೆ ಮಾಡಲಾಗಿದೆ. 2 ಗರ್ಭಗುಡಿ, ತೀರ್ಥ ಮಂಟಪಕ್ಕೆ ₹3.09 ಕೋಟಿ ಟೆಂಡರ್ ಆಗಿದೆ. ಮುಂದಿನ ಟೆಂಡರ್ ಪ್ರಕ್ರಿಯೆ, ಸರ್ಕಾರ ಸೂಚಿತ ಅಂದಾಜು ಪಟ್ಟಿ ಮಾಡಲಾಗಿದೆ. ಗರ್ಭಗುಡಿ ಗ್ರಾಮಸ್ಥರ ಆರ್ಥಿಕ ಸಹಾಯದಿಂದ ಆಗಬೇಕೆನ್ನುವ ಆಶಯವಿದ್ದು, ಭಕ್ತರ ಸಹಕಾರದಿಂದ ಈ ಪುಣ್ಯ ಕಾರ್ಯ ಮಾಡೋಣ. ಜೀರ್ಣೋದ್ದಾರ ಕಾರ್ಯಕ್ಕೆ ಸಂಕೋಚಕ್ಕೆ ತಂತ್ರಿಗಳು ಪ್ರಶಸ್ತ ದಿನ ನೀಡಿದ್ದಾರೆ. ವಿವಿಧ ಸಮಿತಿಗಳು ಕಾರ್ಯೋನ್ಮುಖವಾಗಬೇಕು ಎಂದು ಹೇಳಿದರು.

ತಂತ್ರಿ ವೇದಮೂರ್ತಿ ರಾಧಾಕೃಷ್ಣ ಉಪಾಧ್ಯಾಯ ಮಾತನಾಡಿ, 2026ರ ಮೀನ ಸಂಕ್ರಮಣದ ಒಳಗಾಗಿ ನಡೆಯಬೇಕಾದ ಬ್ರಹ್ಮಕಲಶಾದಿಗಳ ಕಾರ್ಯ ನಡೆಸಬೇಕು ಎಂದು ವಿವರಣೆ ನೀಡಿದರು.

ADVERTISEMENT

ಗೌರವಾಧ್ಯಕ್ಷ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಶುಭ ಹಾರೈಸಿದರು. ರಾಜೇಶ್ ಶೇರಿಗಾರ್, ವಿಶುಕುಮಾರ್ ಶೆಟ್ಟಿಬಾಲ್, ಕೇಶವ ಅಮೀನ್, ರವೀಂದ್ರನಾಥ ಜಿ. ಹೆಗ್ಡೆ, ವಿಷ್ಣುಮೂರ್ತಿ ಆಚಾರ್ಯ ಮಾತನಾಡಿದರು. ಆನುವಂಶಿಕ ಮೊಕ್ತೇಸರ ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳ, ಅರ್ಚಕರಾದ ಪದ್ಮನಾಭ ಭಟ್, ವೈ. ಗುರುರಾಜ ಭಟ್, ರಾಘವೇಂದ್ರ ನಾವಡ ಇದ್ದರು.

ಉಪಾಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಸ್ವಾಗತಿಸಿದರು. ಆನುವಂಶಿಕ ಮೊಕ್ತೇಸರ ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು. ಮುರಳೀನಾಥ ಶೆಟ್ಟಿ ನಿರ್ವಹಿಸಿದರು. ಪದ್ರ ಜಯ ಶೆಟ್ಟಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.