ADVERTISEMENT

ಪಂಚವರ್ಣ: ನಟ ದೊಡ್ಡಣ್ಣನಿಗೆ ರಾಜ್ಯೋತ್ಸವ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 15:26 IST
Last Updated 5 ಅಕ್ಟೋಬರ್ 2023, 15:26 IST
ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣ
ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ್ಣ   

ಕೋಟ: ಇಲ್ಲಿನ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಸದ್ಭಾವನಾ 2023 ಎಂಬ ಶೀರ್ಷಿಕೆಯಡಿ ನವೆಂಬರ್ 10ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕ ಕನ್ನಡ ಚಿತ್ರರಂಗದ ನಟ ದೊಡ್ಡಣ ಅವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ₹15 ಸಾವಿರ ನಗದು, ಬೆಳ್ಳಿ ಸ್ಮರಣಿಕೆ ಒಳಗೊಂಡಿದೆ.

ಇದೇ ವೇಳೆ ಅಮ್ಮಚ್ಚಿ ಎಂಬ ನೆನಪು ಚಿತ್ರದ ನಾಯಕ ರಂಗನಟ ಡಾ.ರಾಧಕೃಷ್ಣ ಉರಾಳ ಅವರಿಗೆ ವಿಶೇಷ ಅಭಿನಂದನೆ ನಡೆಯಲಿದೆ. ಪರಿಸರಸ್ನೇಹಿ ಸಂಘಟನೆ ಕ್ಲಿನ್ ತ್ರಾಸಿ ತಂಡಕ್ಕೆ ವಿಶೇಷ ಪುರಸ್ಕಾರ ನೀಡಲಾಗುತ್ತಿದೆ. ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು, ವಿದ್ಯಾರ್ಥಿವೇತನ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ ವಿತರಣೆ, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ADVERTISEMENT

ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಮಂಗಳೂರಿನ ಬಲೆ ಚಾ ಪರ್ಕ ನಾಟಕ ತಂಡದಿಂದ ನಟ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.