ADVERTISEMENT

ಪುರಾಣದ ಕತೆ ತಲುಪಿಸುವ ತಾಳಮದ್ದಲೆ: ಪಂಡಿತಾಚಾರ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 4:17 IST
Last Updated 24 ಜೂನ್ 2024, 4:17 IST
ಯಕ್ಷಗಾನ ಕಲಾರಂಗದ ವತಿಯಿಂದ ತಾಳಮದ್ದಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಜರುಗಿತು
ಯಕ್ಷಗಾನ ಕಲಾರಂಗದ ವತಿಯಿಂದ ತಾಳಮದ್ದಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಜರುಗಿತು   

ಉಡುಪಿ: ಯಕ್ಷಗಾನವು ನಮ್ಮ ನಾಡಿನ ಪರಿಪೂರ್ಣ ಕಲಾ ಪ್ರಕಾರವಾದರೆ, ತಾಳಮದ್ದಲೆಯು ಪುರಾಣದ ಕತೆಯನ್ನು ಜನ ಸಾಮಾನ್ಯರಿಗೆ ತಲಪಿಸುತ್ತಾ, ವ್ಯಾಖ್ಯಾನಿಸುತ್ತಾ ಬಂದಿದೆ ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ ಹೇಳಿದರು.

ಯಕ್ಷಗಾನ ಕಲಾರಂಗವು ಇನ್ಫೋಸಿಸ್‌ ಪೌಂಡೇಷನ್‌ ಯಕ್ಷಗಾನ ಡೆವಲಪ್‌ಮೆಂಟ್‌, ಟ್ರೈನಿಂಗ್‌ ಆ್ಯಂಡ್‌ ರಿಸರ್ಚ್‌ ಸೆಂಟರ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಳಮದ್ದಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಲಾರಂಗಕ್ಕೆ ತಾಳಮದ್ದಲೆಯ ಕೊಡುಗೆ ಮಹತ್ವದ್ದು ಎಂದರು.

ಕಾರ್ಯಕ್ರಮದಲ್ಲಿ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಜಬ್ಬಾರ್ ಸಮೊ ಅವರಿಗೂ, ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಸೇರಾಜೆ ಸೀತಾರಾಮ ಭಟ್ ಅವರಿಗೂ ಪ್ರದಾನ ಮಾಡಲಾಯಿತು.

ADVERTISEMENT

ಶಾರದಾ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ಎಂ. ಬಿ. ಪುರಾಣಿಕ್‌ ಅಧ್ಯಕ್ಷತೆ ವಹಿಸಿದ್ದರು. ಪಂಜ ಭಾಸ್ಕರ ಭಟ್, ಡಾ. ಆದರ್ಶ ಹೆಬ್ಬಾರ್, ರಜನಿ ಹೆಬ್ಬಾರ್, ಸಂಸ್ಥೆಯ ಉಪಾಧ್ಯಕ್ಷರಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ಇದ್ದರು.

ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಎಚ್. ಎನ್. ಶೃಂಗೇಶ್ವರ ವಂದಿಸಿದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಬಳಿಕ ‘ಸೀತಾಪಹಾರ’ ತಾಳಮದ್ದಲೆ ಪ್ರಸ್ತುತಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.