ಉಡುಪಿ: ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ, ಕಾಂಗ್ರೆಸ್ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲ ಉಂಟು ಮಾಡುವಂತಹ ಹೇಳಿಕೆ ನೀಡುತ್ತಿದ್ದು, ಇದು ಮಧ್ವಾಚಾರ್ಯರ ಪೀಠದಲ್ಲಿ ಕುಳಿತುಕೊಳ್ಳುವಂತಹ ಸ್ವಾಮೀಜಿಯವರಿಗೆ ಶೋಭೆ ತರುವಂಥದ್ದಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷ್ಣ ದೇವರ ಪೂಜೆ ಮಾಡುವ ಮಠಾಧೀಶರು ಬಿಜೆಪಿ ಪರವಾಗಿ, ಮೋದಿ ಅವರ ಪರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ಎಲ್ಲಾ ಪಕ್ಷದವರೂ ಕೃಷ್ಣ ದೇವರ ಭಕ್ತರೇ. ಶ್ರೀಗಳು ಒಂದೇ ಪಕ್ಷದ ಹಿಂದೆ ಹೋಗುತ್ತಿರುವುದನ್ನು ನೋಡಿದರೆ ಇವರು ಮಠಾಧೀಶರೋ ಅಥವಾ ಬಿಜೆಪಿ ವಕ್ತಾರರೋ ಎಂಬಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಬಗ್ಗೆ ಅಥವಾ ಕಾಂಗ್ರೆಸ್ ವಿರುದ್ಧವಾಗಲಿ ಅನಗತ್ಯ ಹೇಳಿಕೆ ನೀಡಿದರೆ ಪ್ರತಿಭಟನೆ ಮಾಡಬೇಕಾಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.