ಕಾಪು (ಪಡುಬಿದ್ರಿ): ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳ ದಾಳಿ ಮಾಡಿರುವುದು ಹಾಗೂ ಸಂಘಟನೆಗಳ ಮುಖಂಡರನ್ನು ಬಂಧಿಸಿರುವುನ್ನು ವಿರೋಧಿಸಿ ಪಿಎಫ್‌ಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಗುರುವಾರ ರಸ್ತೆ ತಡೆ ನಡೆಸಿದರು.
ಪೊಲೀಸ್ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಪ್ರಜಾ ಪ್ರಭುತ್ವ ಮತ್ತು ಜಾತ್ಯಾತೀತ ರಾಷ್ಟ್ರದಲ್ಲಿ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ ಮಾತ್ರ ದಾಳಿ ನಡೆಯುತ್ತಿದೆ. ಆರ್‌ಎಸ್‌ಎಸ್ ಕಚೇರಿಗೆ ದಾಳಿ ನಡೆಸದೆ ಇರುವುದು ಸಂಶಯಕ್ಕೆ ಎಡೆ ಮಾಡುತ್ತಿದೆ. ನಮ್ಮ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಇನ್ನಷ್ಟು ತೀವ್ರ ರೀತಿಯ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿ ಸಿದರು.
ಕಾಪು ವೃತ್ತ ನಿರೀಕ್ಷ ಕೆ.ಸಿ ಪೂವಯ್ಯ,ಕಾಪು ಎಸೈ ಶ್ರೀ ಶೈಲ ಮುರಗೋಡ ಹಾಗು ಸಿಬ್ಬಂದಿಗಳು ಸ್ಥಳದಲ್ಲಿ ಬಂದೊಬಸ್ತ್ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.