ಉಡುಪಿ: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ವಿರುದ್ಧ ‘ಬಿ’ ರಿಪೋರ್ಟ್ ಸಲ್ಲಿಸಲಾಗಿದೆ.
ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಈಶ್ವರಪ್ಪ ವಿರುದ್ಧದ ಆರೋಪಗಳನ್ನು ಕೈಬಿಡಲಾಗಿದೆ. ಪ್ರಕರಣದ ತನಿಖೆಯ ನೇತೃತ್ವ ವಹಿಸಿದ್ದ ಉಡುಪಿ ಇನ್‌ಸ್ಪೆಕ್ಟರ್ ಪ್ರಮೋದ್ ಕುಮಾರ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ‘ ರಿಪೋರ್ಟ್ ಸಲ್ಲಿಸಿದ್ದಾರೆ.
ಬೆಳಗಾವಿಯ ಹಿಂಡಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ₹ 4 ಕೋಟಿ ವೆಚ್ಚದ ಕಾಮಗಾರಿ ಬಿಲ್ ಮಂಜೂರು ಮಾಡಲು ಈಶ್ವರಪ್ಪ 40 ಪರ್ಸೆಂಟ್ ಕಮಿಷನ್‌ಗೆ ಒತ್ತಾಯಿಸಿದ್ದರು ಎಂದು ಆರೋಪಿಸಿ ಏ.11ರಂದು ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮೃತ ಸಂತೋಷ್ ಪಾಟೀಲ ಸಂಬಂಧಿಗಳು ನೀಡಿದ ದೂರಿನಂತೆ ಸೆಕ್ಷನ್ 306, 334 ಅಡಿ ಈಶ್ವರಪ್ಪ (ಎ 1), ಬಸವರಾಜ್ (ಎ 2), ರಮೇಶ್ (ಎ 3) ವಿರುದ್ಧ ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.