ಉಡುಪಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಹಂಬಲವಿತ್ತು. ಆದರೆ, ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದ್ದರಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕಾಯಿತು. ಸದ್ಯ ಮೈತ್ರಿ ಸರ್ಕಾರ ಇಲ್ಲದ ಕಾರಣ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಕಾರಣ ನೀಡಿದ್ದಾರೆ.
ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಅವರು ಜೆಡಿಎಸ್ ಮುಖಂಡರು ಎಂದು ಈಚೆಗೆ ಹಿರಿಯ ಮುಖಂಡ ವೀರಪ್ಪ ಮೊಯ್ಲಿ ನೀಡಿದ್ದ ಹೇಳಿಕೆಗೆ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿತ್ತು. ಕೆಲವರು ಮಧ್ವರಾಜ್ ಪರ ನಿಂತರೆ ಕೆಲವರು ಮೊಯ್ಲಿ ಪರವಾಗಿ ನಿಂತಿದ್ದರು. ಮುಖಂಡರ ನಡುವೆ ವಾಕ್ಸಮರ ನಡೆದಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಮಧ್ವರಾಜ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.