ಉಡುಪಿ: ನಕ್ಸಲ್ ನಿಗ್ರಹ ದಳ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟಿರುವ ವಿಕ್ರಂ ಗೌಡನ ಅಂತ್ಯಸಂಸ್ಕಾರವನ್ನು ಆತನ ಹುಟ್ಟೂರು ಹೆಬ್ರಿ ತಾಲ್ಲೂಕಿನ ಕೂಡ್ಲುವಿನಲ್ಲಿ ನೆರವೇರಿಸಲು ಸಿದ್ಧತೆ ನಡೆದಿದೆ.
ವಿಕ್ರಂ ಗೌಡನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳವಾರ ತಡರಾತ್ರಿ ನಡೆದಿದೆ.
ಮೃತದೇಹವನ್ನು ಸ್ವೀಕರಿಸಲು ವಿಕ್ರಂ ತಂಗಿ ಮತ್ತು ತಮ್ಮ ಮಣಿಪಾಲದ ಆಸ್ಪತ್ರೆಗೆ ತಲುಪಿದ್ದಾರೆ.
'ಕೂಡ್ಲು ಸಮೀಪ ವಿಕ್ರಂಗೆ ಒಂದು ಎಕರೆ ಜಾಗವಿದ್ದು, ಆಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಂನ ತಮ್ಮ ಸುರೇಶ ಗೌಡ ಹಾಗೂ ತಂಗಿ ಸುಗುಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.