ADVERTISEMENT

‘ಬಿಪಿಎಲ್‌ ಪಡಿತರ ಚೀಟಿ ರದ್ದು ವಿರುದ್ಧ ಹೋರಾಟ’

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 14:04 IST
Last Updated 5 ಅಕ್ಟೋಬರ್ 2024, 14:04 IST

ಉಡುಪಿ: ರಾಜ್ಯದಲ್ಲಿ 22 ಲಕ್ಷ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರವು ಮುಂದಾಗಿರುವುದನ್ನು ವಿರೋಧಿಸಿ ರಾಜ್ಯದಾದ್ಯಂತ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಪ್ರತಿಭಟನೆ ನಡೆಯಲಿದೆ ಎಂದು ಮೋರ್ಚಾದ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ ವಿಜಯ್ ಕೊಡವೂರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 40 ಸಾವಿರ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ. ಇನ್ನು 40 ಸಾವಿರ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಪರಿಶೀಲನೆ ನಡೆಯುತ್ತಿದೆ‌. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರ ಹಾಗೂ ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ, 10 ಕೆ.ಜಿ. ಅಕ್ಕಿ ನೀಡಿಲ್ಲ, ಯುವನಿಧಿ ತಲುಪಿಲ್ಲ. ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಅಂಗನವಾಡಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ವಾಲ್ಮೀಕಿ ನಿಗಮದ ನೌಕರರಿಗೆ ಸಂಬಳ ಬಂದಿಲ್ಲ. ಇಂತಹ ಜನ ವಿರೋಧಿ ನೀತಿಯನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ADVERTISEMENT

ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.