ಪಡುಬಿದ್ರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದ ಎಸ್‌ಸಿ ಕಾಲೊನಿ ಬಳಿ ಇರುವ ಅಪಾಯಕಾರಿ ಗೋದಾಮು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಾರ್ಯಕರ್ತರು ಪ್ರತಿಭಟನೆ ನೆಡಸಿ ಗ್ರಾಮ ಪಂಚಾಯಿತಿ ಎದುರು ಧರಣಿ ನಡೆಸಿದರು.
ಎಸ್‌ಸಿ ಕಾಲೊನಿಯಿಂದ ಕಾರ್ಕಳ ರಸ್ತೆಯ ಮೂಲಕ ಹಾದು ಪಡುಬಿದ್ರಿ ಪೇಟೆ ಮೂಲಕ ಗ್ರಾಮ ಪಂಚಾಯಿತಿ ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಪಂಚಾಯಿತಿ ಎದುರು ಧರಣಿ ನಡೆಸಿದರು.
ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಮನವಿ ಸ್ವೀಕರಿಸಿ ನ್ಯಾಯಾಲಯದ ಆದೇಶದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಮಾತನಾಡಿದರು.
ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಸುಂದರ್ ಮಾಸ್ಟರ್, ಪರಮೇಶ್ವರ ಉಪ್ಪೂರ್, ವಿಠಲ ಉಚ್ಚಿಲ, ಶ್ರೀಧರ್ ಉಡುಪಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕ ಸುರೇಶ್ ಪಾದೆಬೆಟ್ಟು, ಮಹಿಳಾ ಸಂಚಾಲಕಿ ವಸಂತಿ ಶಿವಾನಂದ್ ಕಲ್ಲಟ್ಟೆ, ಕಾರ್ಯದರ್ಶಿ ಶಿವಾನಂದ ಕಲ್ಲಟ್ಟೆ, ರಮೇಶ ನಂಬಿಯಾರ್, ಗುಣಕರ್ ಕಂಚಿನಡ್ಕ, ರಮೇಶ್ ಕಲ್ಲಟ್ಟೆ, ವಿಠಲ ಮಾಸ್ಟರ್ ಕಲ್ಲಟ್ಟೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.