ಉಡುಪಿ: ಸುರತ್ಕಲ್ ಟೋಲ್ ಕೇಂದ್ರವನ್ನು ಹೆಜಮಾಡಿ ಟೋಲ್ ಕೇಂದ್ರದ ಜತೆಗೆ ವಿಲೀನಗೊಳಿಸಿ ವಾಹನ ಸವಾರರಿಂದ ದುಪ್ಪಟ್ಟು ಟೋಲ್ ಸಂಗ್ರಹ ಮಾಡುವ ನಿರ್ಧಾರ ಸರಿಯಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ವಿರೋಧ ವ್ಯಕ್ತಪಡಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುರತ್ಕಲ್ ಟೋಲ್‌ಗೂ, ಹೆಜಮಾಡಿ ಟೋಲ್‌ಗೂ ಸಂಬಂಧವಿಲ್ಲ. ಸುರತ್ಕಲ್ ಟೋಲ್ ರದ್ದು ಮಾಡಿದ್ದು ಸರಿಯಾಗಿದೆ. ಆದರೆ ಹೆಜಮಾಡಿ ಟೋಲ್‌ನಲ್ಲಿ ಹೆಚ್ಚುವರಿಯಾಗಿ ಟೋಲ್ ಸಂಗ್ರಹ ಮಾಡಲು ನಿರ್ಧರಿಸಿರುವುದು ಖಂಡನೀಯ. ಇದರಿಂದ ಉಡುಪಿ ಜಿಲ್ಲೆಯ ಜನತೆಗೆ ಹೊರೆಯಾಗಲಿದೆ. ಮುಲ್ಕಿಗೆ ಹೋಗುವ ಜಿಲ್ಲೆಯ ಸಾರ್ವಜನಿಕರು ದುಪ್ಪಟ್ಟು ಟೋಲ್ ಕಟ್ಟಬೇಕಾಗುತ್ತದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮದ ವಿರುದ್ಧ ಕೇಂದ್ರ ಸರ್ಕಾರಕ್ಕೆ ಹಾಗೂ ಹೆದ್ದಾರಿ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ರಘುಪತಿ ಭಟ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.