ಹೆಬ್ರಿ: ಇಲ್ಲಿನ ರಾಪಿಡ್ ಇನ್ಸ್ಟಿಟ್ಯೂಟ್ ಆಫ್ ಅಬಾಕಸ್ ಸಂಸ್ಥೆಯ ವತಿಯಿಂದ ಗ್ರಾಮ ಪಂಚಾಯಿತಿಯ ಸಹಕಾರದಲ್ಲಿ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ರಜಾ ಮಜಾ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪೊಲೀಸ್ ಇಲಾಖೆಯ ಶಂಕರ್ ಪೊಲೀಸ್ ಇಆರ್‌ಎಸ್‌ಎಸ್ ವಾಹನದ ಬಗ್ಗೆ ಮಾಹಿತಿ ನೀಡಿದರು.
ಸರ್ಕಾರಿ ಸಮುದಾಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್ ಬೈಲೂರು ದಂತ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿ ರಾಧಿಕಾ, ಸಮುದಾಯ ಅರೋಗ್ಯ ಅಧಿಕಾರಿ ರಂಗರಾಜ್ ಮಕ್ಕಳ ಎಚ್‌ಬಿ ಪರೀಕ್ಷೆ ನಡೆಸಿದರು. ಅಬಾಕಸ್ ಸಂಸ್ಥೆಯ ಮುಖ್ಯ ಶಿಕ್ಷಕಿ ಸುನಿತಾ ಹೆಬ್ಬಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.