ADVERTISEMENT

ಡಾ.ಬಿ.ಎ.ವಿವೇಕ ರೈಗೆ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ 6ರಂದು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 12:33 IST
Last Updated 2 ಸೆಪ್ಟೆಂಬರ್ 2022, 12:33 IST
ಪ್ರೊ.ಬಿ.ಎ.ವಿವೇಕ ರೈ
ಪ್ರೊ.ಬಿ.ಎ.ವಿವೇಕ ರೈ   

ಉಡುಪಿ: ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ.ಬಿ.ಎ ವಿವೇಕ ರೈ ಅವರನ್ನು ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭ ಸೆ.6ರಂದು ಬೆಳಿಗ್ಗೆ 10 ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಅತಿಥಿಗಳಾಗಿ ಮಾಹೆಯ ಸಹ ಕುಲಪತಿ ಡಾ.ಎಂ.ವೆಂಕಟರಾಯ ಪ್ರಭು ಉಪಸ್ಥಿತರಿರಲಿದ್ದಾರೆ. ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ತಾಳ್ತಜೆ ವಸಂತ ಕುಮಾರ್ ಅಭಿನಂದನಾ ಭಾಷಣ ಮಾಡಲಿದ್ದಾರೆ

ಮೈಸೂರಿನ ಡಿ. ಬನುಮಯ್ಯ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಎಸ್. ಶಿವಾಜಿ ಜೋಯಿಸ್ ಗೋವಿಂದ ಪೈ. ಗ್ರಥನ ಕೌಶಲ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕೆ.ಎನ್‌.ಶರಣ್ಯ, ಕೆ.ಎನ್‌.ಸುಮೇಧ ಸಹೋದರಿಯರಿಂದ ರಾಷ್ಟ್ರಕವಿ ಗೋವಿಂದ ಪೈಗಳ ಕಾವ್ಯಗಾಯನ ಕಾರ್ಯಕ್ರಮ ನಡೆಯಲಿದೆ ಎಂದುರಾಷ್ಟ್ರಕವಿ ಗೋವಿಂದ ಪೈ ಪ್ರತಿಷ್ಠಾನದ ಆಡಳಿತಾಧಿಕಾರಿ ಡಾ.ವೈ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.