ADVERTISEMENT

ಕ್ಯಾನ್ಸರ್ ಜಾಗೃತಿ, ತಪಾಸಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 13:01 IST
Last Updated 27 ಮಾರ್ಚ್ 2023, 13:01 IST
ಉಡುಪಿಯ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸೋಮವಾರ ನಡೆದ   ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ ಉದ್ಘಾಟಿಸಿದರು.
ಉಡುಪಿಯ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸೋಮವಾರ ನಡೆದ   ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ ಉದ್ಘಾಟಿಸಿದರು.   

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಸಹಯೋಗದೊಂದಿಗೆ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಸೋಮವಾರ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ, ರೆಡ್‌ಕ್ರಾಸ್ ಮಾನವೀಯ ನೆಲೆಯಲ್ಲಿ ಸಮಾಜಮುಖಿ ಸೇವೆಗಳಲ್ಲಿ ನಿರತವಾಗಿದ್ದು ಕ್ಯಾನ್ಸರ್ ಬಗ್ಗೆಯೂ ವಿದ್ಯಾರ್ಥಿನಿಯರಿಗೆ ಜಾಗೃತಿ ಮೂಡಿಸುತ್ತಿದೆ. ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿಯಮಿತ ತಪಸಣೆಗೊಳಪಡುವ ಮೂಲಕ ಕ್ಯಾನ್ಸರ್ ಹಾಗೂ ಇತರೆ ಕಾಯಿಲೆಗಳಿಂದ ದೂರವಿರಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ, ಆಡಳಿತ ಮಂಡಳಿ ಸದಸ್ಯ ಟಿ. ಚಂದ್ರಶೇಖರ್, ಯುವ ರೆಡ್‌ಕ್ರಾಸ್ ಕಾರ್ಯಕ್ರಮ ಅಧಿಕಾರಿ ಪ್ರೊ.ಶೋಭಾ ಹಾಗೂ ವಿದ್ಯಾರ್ಥಿನಿಯರು ಇದ್ದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.