ADVERTISEMENT

ಜೀರ್ಣೋದ್ಧಾರ: ವಿಜ್ಞಾಪನ ಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 13:25 IST
Last Updated 14 ನವೆಂಬರ್ 2024, 13:25 IST
ಹೆಬ್ರಿಯ ಬಡಾಗುಡ್ಡೆ ಕೊರತಿ ಕೊರಗಜ್ಜ ದೈವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲಕ್ಷ್ಮೀನಾರಾಯಣ್ ನಾಯಕ್ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ ಮಾಡಿದರು
ಹೆಬ್ರಿಯ ಬಡಾಗುಡ್ಡೆ ಕೊರತಿ ಕೊರಗಜ್ಜ ದೈವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಲಕ್ಷ್ಮೀನಾರಾಯಣ್ ನಾಯಕ್ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ ಮಾಡಿದರು   

ಹೆಬ್ರಿ: ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಊರಿನ ಜನರು ಸಹಕಾರ ನೀಡಬೇಕು. ಕಡಿಮೆ ಸಮಯದಲ್ಲಿ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಹೆಬ್ರಿಯ ಬಡಾಗುಡ್ಡೆ ಕೊರತಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ್ ನಾಯಕ್ ಹೇಳಿದರು.

ಬಡಾಗುಡ್ಡೆಯಲ್ಲಿ ಇತ್ತೀಚೆಗೆ ಕೊರತಿ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಮಿತಿಯ ಗೌರವಾಧ್ಯಕ್ಷ ಎಚ್.‌ ನಾಗರಾಜ್ ಜೋಯಿಸ್, ಪ್ರಧಾನ ಕಾರ್ಯದರ್ಶಿ ಎಚ್.ಜನಾರ್ದನ್, ಆಡಳಿತ ಮಂಡಳಿಯ ಅಧ್ಯಕ್ಷ ಜನಾರ್ದನ್ ಬಡಾಗುಡ್ಡೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರನಾಥ ಎಸ್. ಬಂಗೇರ, ಸ್ಥಳೀಯ ಪ್ರಮುಖರಾದ ಸುಧಾಕರ ಹೆಗ್ಡೆ, ಶ್ರೀಕಾಂತ್ ಪೂಜಾರಿ ಕುಚ್ಚೂರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT